ಇನ್ಮುಂದೆ ಹಣದ ಬದಲಿಗೆ ಅಕ್ಕಿಯನ್ನೇ ನೀಡಲಿದೆ ರಾಜ್ಯ ಸರ್ಕಾರ..!

Date:

ಇನ್ಮುಂದೆ ಹಣದ ಬದಲಿಗೆ ಅಕ್ಕಿಯನ್ನೇ ನೀಡಲಿದೆ ರಾಜ್ಯ ಸರ್ಕಾರ..!

ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡಲು ಉದ್ದೇಶಿಸಲಾಗಿತ್ತು. ಆದರೆ ಅಕ್ಕಿ ಕೊರತೆಯಿಂದ, ಈ ಯೋಜನೆಯಲ್ಲಿ ಬದಲಾವಣೆ ಮಾಡಲಾಗಿದ್ದು, 5 ಕೆಜಿ ಅಕ್ಕಿ ವಿತರಿಸಿ ಉಳಿದ 5 ಕೆಜಿ ಅಕ್ಕಿಗೆ ನಗದು ಸಹಾಯ ನೀಡಲಾಗುತ್ತಿತ್ತು. ಆದ್ರೆ ಇದೀಗ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದು, ಇದೇ ತಿಂಗಳಿನಿಂದ ನೀಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದ ಅಕ್ಕಿಯನ್ನು ಫಲಾನುಭವಿಗಳಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು ಕೊಡಲು ಕೇಂದ್ರ ಸರ್ಕಾರವು ಒಪ್ಪಿಗೆ ಕೊಟ್ಟಿದೆ. ಪ್ರತಿ ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ ಎಂದು ಹೇಳಿದರು.
ನಮ್ಮ ಇಲಾಖೆ ಅಧಿಕಾರಿಗಳು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದಾರೆ. ಈಗ ಕೇಂದ್ರ ಸಚಿವರು ಅಕ್ಕಿ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಹಾಕುತ್ತೇವೆ. ಫೆಬ್ರವರಿಯಿಂದ 10 ಕೆಜಿ ಅಕ್ಕಿ ಕೊಡುವ ತೀರ್ಮಾನ ಮಾಡಿದ್ದೇವೆ. 2013ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ನಾವು ನುಡಿದಂತೆ ನಡೆದಿದ್ದೇವೆ. ರಾಜ್ಯದ ಜನರಿಗೆ ಅಕ್ಕಿ, ಹಣ ಎರಡನ್ನೂ ಕೊಟ್ಟಿದ್ದೇವೆ ಎಂದರು.

Share post:

Subscribe

spot_imgspot_img

Popular

More like this
Related

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...

ಕೋಗಿಲು ಅಕ್ರಮ ಮನೆ ತೆರವು ವಿಚಾರ: ಸಿಎಂ–ಡಿಸಿಎಂ ಯೂಟರ್ನ್ ಹೊಡೆದಿದ್ದಾರೆ – ವಿಜಯೇಂದ್ರ ಟೀಕೆ

ಕೋಗಿಲು ಅಕ್ರಮ ಮನೆ ತೆರವು ವಿಚಾರ: ಸಿಎಂ–ಡಿಸಿಎಂ ಯೂಟರ್ನ್ ಹೊಡೆದಿದ್ದಾರೆ –...