ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ: ‘SSLC’ ವಿದ್ಯಾರ್ಥಿ ಸಾವು..!
ತುಮಕೂರು: ಹಿರಿಯರು, ವಯೋವೃದ್ಧರಿಗೆ ಬಾಧಿಸುತ್ತಿದ್ದ ಹೃದಯಾಘಾತ ಈಗ ಎಳೆಯರಲ್ಲೂ ಕಾಡುತ್ತಿದ್ದು, ಇದೀಗ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ.
ರಾಹುಲ್ (16) ಮೃತ ವಿದ್ಯಾರ್ಥಿ. ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್‌ಎಸ್‌ನಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಶುಕ್ರವಾರ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದ ರಾಹುಲ್‌ಗೆ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ.
ಕೂಡಲೇ ರಾಹುಲ್‌ನನ್ನು ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ರಾಹುಲ್ ಕೊನೆಯುಸಿರೆಳೆದಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.