ರಸ್ತೆ ಅಪಘಾತದಲ್ಲಿ ಮಹಾಕುಂಭ ಮೇಳಕ್ಕೆ ಹೋಗಿದ್ದ 6 ಮಂದಿ ಸಾವು!

Date:

ರಸ್ತೆ ಅಪಘಾತದಲ್ಲಿ ಮಹಾಕುಂಭ ಮೇಳಕ್ಕೆ ಹೋಗಿದ್ದ 6 ಮಂದಿ ಸಾವು!

ಪ್ರಯಾಗ್‌ರಾಜ್ನ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕಪ ಅಪಘಾತ ಸಂಭವಿಸಿ ಬೆಳಗಾವಿ ಗೋಕಾಕ್‌ ನಗರದ 6 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ನಡೆದಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು. ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಯಾಗ್‌ರಾಜ್‌ನಲ್ಲಿ 144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಮುಕ್ತಾಯವಾಗಲು ಇನ್ನೆರಡು ದಿನ ಬಾಕಿಯಿದೆ. ಮಹಾ ಶಿವರಾತ್ರಿಯ ದಿನದಂದೇ ಕುಂಭಮೇಳ ಅಂತ್ಯವಾಗಲಿದೆ.

Share post:

Subscribe

spot_imgspot_img

Popular

More like this
Related

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ ಮಂಡ್ಯ:...

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ ಚಳಿಗಾಲದಲ್ಲಿ ಅನೇಕರು...

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ ಬೆಂಗಳೂರು:...