No menu items!
12.4 C
Munich
Wednesday, September 2, 2026

ಸಾಲಭಾದೆಯಿಂದ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

Must read

ಸಾಲಭಾದೆಯಿಂದ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಮಂಡ್ಯ: ಸಾಲಭಾದೆಯಿಂದ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಚಂದಗಾಲುವಿನ ಯರಳ್ಳಿ ಮಾರ್ಗದ ವಿಸಿ ನಾಲೆಯಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಮಾಸ್ತಪ್ಪ (65), ರತ್ನಮ್ಮ (45) ಮತ್ತು ಲಕ್ಷ್ಮಿ (18) ಮೃತರು ಎಂದು ಗುರುತಿಸಲಾಗಿದೆ.
ಮಾಸ್ತಪ್ಪ ಆಟೋ ಓಡಿಸಿಕೊಂಡು ಜೀವನ ಮಾಡುತ್ತಿದ್ದರು. ಸುಮಾರು 3 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದ ಮಾಸ್ತಪ್ಪ, ಸಾಲಕೊಟ್ಟವರು ಇಂದು ಮನೆ ಬಳಿ ಗಲಾಟೆ ಮಾಡಿದ್ದಕ್ಕೆ ನೊಂದಿದ್ದರು. ಮರ್ಯಾದೆಗೆ ಅಂಜಿ ಮಗಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article