ತೆಲುಗು ನಟ ಪೊಸಾನಿ ಕೃಷ್ಣ ಮುರಳಿ ಅರೆಸ್ಟ್..!
ಅಮರಾವತಿ: ಜನಪ್ರಿಯ ನಟ ಪೊಸಾನಿ ಕೃಷ್ಣ ಮುರಳಿ ಅವರನ್ನು ರಾಯಚೋಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್‌ನಲ್ಲಿರುವ ಪೊಸಾನಿ ಕೃಷ್ಣ ಮುರಳಿ ನಿವಾಸಕ್ಕೆ ತೆರಳಿದ ಅನ್ನಮಯ್ಯ ಜಿಲ್ಲೆಯ ರಾಯಚೋಟಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಟನನ್ನು ಬಂಧಿಸಿರುವ ಪೊಲೀಸರು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.
ಸಮುದಾಯವೊಂದರ ವಿರುದ್ಧ ನಟ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಎರಡು ಗುಂಪುಗಳ ನಡುವೆ ವೈಷಮ್ಯಕ್ಕೂ ಕಾರಣವಾಯಿತು. ಈ ಹಿನ್ನೆಲೆ ಪೋಸಾನಿ ಕೃಷ್ಣ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.