ಇಡ್ಲಿ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಇಡ್ಲಿ ತಿಂದ್ರೆ ನಿಮಗೆ ಬರುತ್ತೆ ಕ್ಯಾನ್ಸರ್!
ಬೆಂಗಳೂರು: ರಸ್ತೆಬದಿಯ ಇಡ್ಲಿಗಳನ್ನು ಖರೀದಿಸುವ ಮೊದಲು ಎರಡು ಬಾರಿ ಯೋಚಿಸಿ ತಿನ್ನಬೇಕಾದ ಪರಿಸ್ಥಿತಿ ಬಂದಿದೆ. ಬೆಂಗಳೂರಿನ ಹಲವಡೆ ಇತ್ತಿಚ್ಚಿಗೆ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಕೆ ಮಾಡಿರುವುದು ಬೆಲಕಿಗೆ ಬಂದಿದೆ. ಇಡ್ಲಿ ಮಾಡುವಾಗ ಮಾತ್ರವಲ್ಲದೆ ಆಹಾರವನ್ನು ಬಡಿಸುವಾಗಲೂ, ಪ್ಯಾಕ್ ಮಾಡುವಾಗಲೂ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ.
ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದಿದ್ದವು. ದೂರು ಬಂದ ಹಿನ್ನೆಲೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಸುಮಾರು 500 ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ 35 ಕಡೆ ಪ್ಲಾಸ್ಟಿಕ್ ಬಳಕೆ ಮಾಡಿರುವುದು ಪತ್ತೆಯಾಗಿತ್ತು. ಈ ಬೆನ್ನಲ್ಲೇ 35 ಮಳಿಗೆದಾರರಿಗೆ ನೋಟಿಸ್ ನೀಡಲಾಗಿತ್ತು.
ಅಲ್ಲದೇ 500 ಕಡೆಗಳಲ್ಲಿ ಕಡೆಗಳಲ್ಲಿ ಸಂಗ್ರಹಿಸಿದ್ದ ಮಾದರಿಗಳನ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 35 ಡೇಂಜರ್ ಅಂತ ವರದಿ ಬಂದಿದೆ. ಇಡ್ಲಿಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಶಾಖ ಹೆಚ್ಚಾದಂತೆ ಪಿಎಫ್‌ಎಎಸ್ ಕೆಮಿಕಲ್ ಎಂಬ ಹಾನಿಕಾರಕ ಅಂಶ ಹೊರ ಸೂಸುತ್ತದೆ ಅಂತ ವರದಿ ಬಂದಿದೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಆಹಾರ ತಯಾರಿಕೆಗೆ ಬಳಸುವ ಈ ಪ್ಲಾಸ್ಟಿಕ್ ಬಳಕೆಯನ್ನ ನಿಷೇಧ ಮಾಡೋದಕ್ಕೆ ಇಲಾಖೆ ಮುಂದಾಗಿದೆ.