ಕಾರು ಮತ್ತು ಬೈಕ್ ನಡುವೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು
ಬಂಗಾರಪೇಟೆ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಂಗಾರಪೇಟೆ ತಾಲ್ಲೂಕು ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಹೈವೆಯಲ್ಲಿ ನಡೆದಿದೆ. ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45) , ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಮೃತ ದುರ್ದೈವಿಗಳು. ಸುಶ್ಮಿತಾ, ವಿರುತ, ಸುಜಾತ, ಸುನಿಲ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.