ಅನುಮತಿ ಇಲ್ಲದೇ ಶೂಟಿಂಗ್: ತರುಣ್ ಸುಧೀರ್, ರಾಣಾ ಸಿನಿಮಾಗೆ ಶಾಕ್ ಕೊಟ್ಟ ಅರಣ್ಯ ಇಲಾಖೆ
ತುಮಕೂರು: ನಟಿ ರಕ್ಷಿತಾ ಅವರ ಸಹೋದರ ರಾಣಾ ನಾಯಕನಾಗಿ ನಟಿಸುತ್ತಿರುವ ಹೊಸ ಸಿನಿಮಾ ತಂಡಕ್ಕೆ ಅರಣ್ಯ ಇಲಾಖೆ ಶಾಕ್ ನೀಡಿದೆ. ತುಮಕೂರಿನ ನಾಮಚಿಲುಮೆ ಬಳಿ ಅನುಮತಿ ಇಲ್ಲದೆ ಚಿತ್ರೀಕರಣ ಮಾಡುತ್ತಿದ್ದ ಹಿನ್ನೆಲೆ ಚಿತ್ರೀಕರಣ ನಡೆಯುತ್ತಿದ್ದ ಸ್ಥಳದ ಮೇಲೆ ತುಮಕೂರು ಎಸಿಎಫ್ ಪವಿತ್ರಾ ನೇತೃತ್ವದಲ್ಲಿ ನಡೆಸಿದ್ದಾರೆ.
ಕಳೆದ 5 ದಿನದಿಂದ ನಾಮದಚಿಲುಮೆಯಲ್ಲಿ ನಡೆಯುತ್ತಿದ್ದ ಶೂಟಿಂಗ್, ತರುಣ್ ಸುಧೀರ್ ಕ್ರಿಯೇಟಿವ್ ಹೆಸರಿನಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ನಟಿ ರಕ್ಷಿತಾ ಸಹೋದರ ರಾಣ, ಪ್ರಿಯಾಂಕಾ ಈ ಸಿನಿಮಾದಲ್ಲಿ ನಟಿಸುತ್ತಿದ್ದರು.
ಸುಮಾರು 50-100 ಜನ ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಅರಣ್ಯ ಇಲಾಖೆ ದಾಳಿ ವೇಳೆ ಸಿನಿಮಾ ಚಿತ್ರೀಕರಣಕ್ಕೆ ಬಳಸಲಾಗಿರುವ ಕ್ಯಾರವಾನ್, ಕ್ಯಾಮರಾ ಲೈಟ್, ಕೆಲ ಸಾಮಗ್ರಿ ಪತ್ತೆ, ಲೈಟ್, ಅಡುಗೆ ಸಾಮಗ್ರಿ, ಚೇರ್ಗಳು, ಟೆಂಪೊ ಟ್ರಾವೆಲರ್ ಅನ್ನು ವಶಕ್ಕೆ ಪಡೆಯಲಾಗಿದೆ.