IPL 2025: IPL ಗೆ ಎಂಟ್ರಿ ಕೊಟ್ಟ ಆಫ್ರಿಕಾ ವೇಗಿ.. PSL ಗೆ ಟಾಟಾ ಬೈ ಬೈ!
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚಾನ್ಸ್ ಸಿಗುತ್ತಿದ್ದಂತೆ ಸೌತ್ ಆಫ್ರಿಕಾ ವೇಗಿ ಕಾರ್ಬಿನ್ ಬಾಷ್ ಪಿಎಸ್ಎಲ್ಗೆ ಕೈ ಕೊಟ್ಟಿದ್ದಾರೆ.
ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಷ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಹೀಗಾಗಿ ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್ಗೆ ಹೆಸರು ನೀಡಿದ್ದರು. ಅದರಂತೆ ಪಿಎಸ್ಎಲ್ನ ಪೇಶಾವರ್ ಝಲ್ಮಿ ಫ್ರಾಂಚೈಸಿಯು ಬಾಷ್ ಅವರನ್ನು ಮುಂಬರುವ ಟೂರ್ನಿಗೆ ಆಯ್ಕೆ ಮಾಡಿಕೊಂಡಿದ್ದರು. ಆದರೀಗ ಸೌತ್ ಆಫ್ರಿಕಾ ಪಾಕಿಸ್ತಾನ್ ಸೂಪರ್ ಲೀಗ್ಗೆ ಕೈಕೊಟ್ಟಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲಿಝಾಡ್ ವಿಲಿಯಮ್ಸ್ ಮೊಣಕಾಲಿನ ಗಾಯದ ಕಾರಣ ಈ ಬಾರಿಯ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಯಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಾರ್ಬಿನ್ ಬಾಷ್ ಅವರನ್ನು ಆಯ್ಕೆ ಮಾಡಿಕೊಂಡಿದೆ.
ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚಾನ್ಸ್ ಸಿಕ್ಕಿದ್ದೇ ತಡ, ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್ನಿಂದ ಹಿಂದೆ ಸರಿದಿದ್ದಾರೆ. ಅದರಂತೆ ಈ ಬಾರಿಯ ಐಪಿಎಲ್ನಲ್ಲಿ ಬಾಷ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಪಿಎಸ್ಎಲ್ನಲ್ಲಿ ಪೇಶಾವರ್ ಝಲ್ಮಿ ಫ್ರಾಂಚೈಸಿಗೆ ಇದೀಗ ಬದಲಿ ಆಟಗಾರನ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.