ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ
ಬೆಂಗಳೂರು: ಬೋವಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದ ಜೀವಾ ಎನ್ನುವ ವಕೀಲೆಯ ಆತ್ಮಹತ್ಯೆ ಘಟನೆಗೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀಯನ್ನು ಎಸ್‌ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಭೋವಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ವಕೀಲೆ ಜೀವಾ ಹಾಗು ಇತರರನ್ನು ವಿಚಾರಣೆ ಮಾಡಲಾಗಿತ್ತು. ಈ ವೇಳೆ ಜೀವಾಳಿಗೆ ಡಿವೈಎಸ್ಪಿ ಕನಕಲಕ್ಷ್ಮೀ ಸಾಕಷ್ಟು ಟಾರ್ಚರ್ ನೀಡಿರುವ ಆರೋಪ ಇದೆ. ಜೀವಾಳ ಬಟ್ಟೆ ಬಿಚ್ಚಿ ಹಲ್ಲೆ ಮಾಡಲಾಗಿದೆ. ಜೀವಾ ಬರೆದಿರುವ 13 ಪುಟಗಳ ಡೆತ್ನೋಟ್ನಲ್ಲಿ ಕನಕಲಕ್ಷ್ಮೀ ಹೆಸರನ್ನು ಸ್ಪಷ್ಟವಾಗಿ ಹೇಳಿದ್ದರು. ಸದ್ಯ ಇಂದು ಬೆಳಗ್ಗೆ ಕನಕಲಕ್ಷ್ಮೀ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾಗ ಬಂಧಿಸಲಾಗಿದೆ. ಈ ಹಿಂದೆ ಎರಡು ಬಾರಿ ಕನಕಲಕ್ಷ್ಮೀ ಅವರ ಹೇಳಿಕೆಯನ್ನು ಎಸ್‌ಐಟಿ ದಾಖಲು ಮಾಡಿತ್ತು. ಇಂದು ಬೆಳಗ್ಗೆ ವಿಚಾರಣೆಗೆ ಒಳಪಡಿಸಿ ಬಳಿಕ ಬಂಧಿಸಲಾಗಿದೆ.