ಡ್ರಗ್ ಪ್ರಕರಣ: ನಟಿ ಸಂಜನಾ, ರಾಗಿಣಿಗೆ ಬಿಗ್ ಶಾಕ್ ನೀಡಿದ ಸಿಸಿಬಿ!
ನ್ಯಾ ರಾವ್ ಬಂಧಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ದಶದಿಕ್ಕಿನಲ್ಲೂ ಗೋಲ್ಡ್ ಸ್ಮಗ್ಲಿಂಗ್ ಜಾಲದ ಇಂಚಿಂಚೂ ಮಾಹಿತಿಯನ್ನು ಜಾಲಾಡುತ್ತಿದ್ದಾರೆ. ದಿನಗಳು ಕಳೆದಂತೆ ಗೋಲ್ಡನ್ ಗರ್ಲ್ ರನ್ಯಾ ರಾವ್ ಪ್ರಕರಣದ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿದೆ. ಇದರ ನಡುವೆ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಎಫ್ಐಆರ್ ರದ್ದು ಪ್ರಶ್ನಿಸಿ ಸಿಸಿಬಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗುತ್ತಿದೆ.
2020 ರಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯನ್ನು ಪೊಲೀಸರು ಬಂಧಿಸಿದ್ದರು. ನಟಿಯರು ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಅರ್ಜಿ ಹಾಕಿದ್ದರು. ಅಲ್ಲದೆ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಗಿಣಿ ವಿರುದ್ಧ ಪ್ರಕರಣವನ್ನು ಸಾಕ್ಷ್ಯಗಳ ಕೊರತೆಯಿಂದಾಗಿ ರದ್ದು ಮಾಡಿತ್ತು. ಸಂಜನಾ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಸಹ ರದ್ದಾಗಿತ್ತು.
ಇದೀಗ ಸಿಸಿಬಿಯು ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿದೆ. ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯ ಸಮ್ಮತಿ ಮೇರೆಗೆ ಇಬ್ಬರು ನಟಿಯರ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಈ ಹಿಂದೆ ದರ್ಶನ್ ಪ್ರಕರಣದಲ್ಲಿಯೂ ಸಹ ರಾಜ್ಯ ಪೊಲೀಸರು ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಅದರಿಂದ ಹೆಚ್ಚಿನ ಉಪಯೋಗವೇನೂ ಆದಂತಿಲ್ಲ. ಇದೀಗ ಐದು ವರ್ಷ ಹಳೆಯ ಪ್ರಕರಣದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.