No menu items!
12.4 C
Munich
Wednesday, September 2, 2026

ಬೆಂಗಳೂರು: ನೀರು ಹಿಡಿಯಲು ಹೋದ ಮಹಿಳೆ ವಿದ್ಯುತ್ ಸ್ಪರ್ಶಿಸಿ ಸಾವು..!

Must read

ಬೆಂಗಳೂರು: ನೀರು ಹಿಡಿಯಲು ಹೋದ ಮಹಿಳೆ ವಿದ್ಯುತ್ ಸ್ಪರ್ಶಿಸಿ ಸಾವು..!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನೀರು ಹಿಡಿಯಲು ಹೋದ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ 5:30ರ ಸುಮಾರಿಗೆ ನಡೆದಿದೆ. ಮೃತ ಮಹಿಳೆಯನ್ನು ಸೆಲ್ವಿ (24) ಎಂದು ಗುರುತಿಸಲಾಗಿದೆ.
ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ.
ಆಕ್ರೋಶಗೊಂಡ ಸ್ಥಳೀಯರಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ದಾರೆ. ಪರಿಣಾಮ ಮಾರ್ಕೆಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೈಸೂರು ರಸ್ತೆ ಎರಡೂ ಕಡೆ ಸಂಪೂರ್ಣ ಬಂದ್ ಆಗಿದ್ದು, ನ್ಯಾಯ ಬೇಕು ಎಂದು ಘೋಷಣೆ ಕೂಗಿ ಸಾರ್ವಜನಿಕರು ಪ್ರತಿಭಟಿಸಿದ್ದಾರೆ. ಜಲಮಂಡಳಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

- Advertisement -spot_img

More articles

- Advertisement -spot_img

Latest article