ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಯಿಂದಲೇ ಅತ್ತೆ-ಮಾವನ ಮೇಲೆ ಹಲ್ಲೆ: ಸೊಸೆ ವಿರುದ್ಧ ದೂರು ದಾಖಲು

Date:

ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಯಿಂದಲೇ ಅತ್ತೆ-ಮಾವನ ಮೇಲೆ ಹಲ್ಲೆ: ಸೊಸೆ ವಿರುದ್ಧ ದೂರು ದಾಖಲು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಲೇ ಇದೆ. ಆದರೆ ಕೆಲವು ಮಹಿಳೆಯರು ಮಾತ್ರ ಈ ಸಂಬಂಧದ ಕಾನೂನನ್ನು ದುರುಪಯೋಗ ಮಾಡಿಕೊಂಡಿರುವ ಸಾಕಷ್ಟು ಘಟನೆಗಳು ಸಹ ನಮ್ಮ ಕಣ್ಣ ಮುಂದೆ ಇವೆ. ಅದರಂತೆ ಇದೀಗ ಬೆಂಗಳೂರಿನ ಪ್ರತಿಷ್ಠಿತ ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ವಯಸ್ಸಾದ ಅತ್ತೆ ಮಾವನ ಮೇಲೆ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿದೆ.
ಮಾರ್ಚ್ 10 ರಂದು ರಾತ್ರಿ 8:15 ಕ್ಕೆ ಈ ಘಟನೆ ನಡೆದಿದ್ದು, ವಿಡಿಯೋದಲ್ಲಿ ಮಹಿಳೆ ವೈದ್ಯೆ ಡಾ. ಪ್ರಿಯದರ್ಶಿನಿ ಎಂದು ಹೇಳಲಾಗುತ್ತಿದೆ. ಏಕಾಏಕಿ ಮನೆಗೆ ಬಂದು ವಯಸ್ಸಾದ ಅತ್ತೆ ಮಾವನ ಮೇಲೆ ಹಲ್ಲೆ ಮಾಡಿದ್ದು, ಅತ್ತೆಯ ತಾಳಿ ಹಿಡಿದು, ಕಾಲಿಂದ ಹೊಡೆದು ಹಿಂಸೆ ನೀಡಿದ್ದಾರೆ. ಹಲ್ಲೆ ಮಾಡಿರುವ ಟ್ವೀಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಹಲವರು ಬೆಂಗಳೂರು ನಗರ ಪೊಲೀಸ್‌ಗೆ ಟ್ಯಾಗ್‌ ಮಾಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ವೈದ್ಯ ವಿರುದ್ಧ ದೂರು ಮಾವನಾದ ನರಸಿಂಹಯ್ಯ ಎಂಬುವವರು ದೂರು ನೀಡಿದ್ದಾರೆ. ” 2007 ರಲ್ಲಿ ನನ್ನ ಮಗ ಹಾಗೂ ಪ್ರಿಯದರ್ಶಿನಿ ಎಂಬುವವರಿಗೆ ಮದುವೆಯಾಗಿತ್ತು. ಸದ್ಯ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಪ್ರಕರಣವು ಕೋರ್ಟ್‌ನಲ್ಲಿದೆ. ಮಾರ್ಚ್‌ 10 ರ ರಾತ್ರಿ ಏಕಾಏಕಿ ಪ್ರಿಯದರ್ಶಿನಿ ತನ್ನ ಮಕ್ಕಳೊಂದಿಗೆ ಮನೆಗೆ ಬಂದು ನನಗೆ, ನನ್ನ ಪತ್ನಿ ಹಾಗೂ ಮಗನಿಗೆ ಅವ್ಯಾಚ್ಯ ಪದಗಳಿಂದ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....