No menu items!
15.2 C
Munich
Monday, July 13, 2026

ಪೋಕ್ಸೋ ಕೇಸ್‌: ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪಗೆ ರಿಲೀಫ್‌

Must read

ಪೋಕ್ಸೋ ಕೇಸ್‌: ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪಗೆ ರಿಲೀಫ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ 2024 ರ ಮಾರ್ಚ್ನಲ್ಲಿ ಕೇಳಿಬಂದಿತ್ತು. ಸಂತ್ರಸ್ತೆಯ ತಾಯಿ ಈ ಆರೋಪ ಮಾಡಿದ್ದರು.
ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ.
ಹಾಗೇ, ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್ ಯಡಿಯೂಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಬಿಎಸ್ ಯಡಿಯೂರಪ್ಪ ವಕೀಲರ ಮನವಿಗೆ ಅಡ್ವೊಕೇಟ್ ಜನರಲ್ ಆಕ್ಷೇಪಿಸಿದರು. ಹೈಕೋರ್ಟ್ ಸೂಚನೆಯಂತೆ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಹೀಗಾಗಿ ಸಮನ್ಸ್ಗೆ ತಡೆ ನೀಡದಂತೆ ಮನವಿ ಮಾಡಿದರು.
ವಾದ-ಪ್ರತಿವಾದ ಆಲಿಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ, ಬಿಎಸ್ ಯಡಿಯೂರಪ್ಪ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಹಾಗೇ, ಖುದ್ದು ಹಾಜರಾತಿಯಿಂದಲೂ ಬಿಎಸ್ ಯಡಿಯೂರಪ್ಪ ಅವರಿಗೆ ವಿನಾಯಿತಿ ನೀಡಿದೆ.

- Advertisement -spot_img

More articles

- Advertisement -spot_img

Latest article