ಕೆಎಸ್‍ಆರ್‌ಟಿಸಿ ಬಸ್ ಮೇಲೆ ಕಲ್ಲು ತೂರಾಟ: ಹೋಳಿಹಬ್ಬದಂದು ಮರಾಠಿಗರ ಪುಂಡಾಟ!
ಬೆಳಗಾವಿ:- ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಇಚಲಕರಂಜಿಯಲ್ಲಿ ಕೆಎಸ್‍ಆರ್‌ಟಿಸಿ ಬಸ್ ಮೇಲೆ ಮರಾಠಿ ಪುಂಡರು ಕಲ್ಲು ತೂರಾಟ ನಡೆಸಿದ ಘಟನೆ ಜರುಗಿದೆ.
ಹೋಳಿ ಬಣ್ಣ ಎರಚುವ ವೇಳೆ ಬಸ್ ಹಾಗೂ ಇತರ ವಾಹನಗಳಿಗೆ ಮಸಿ ಎರಚಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಮೂಲಕ ಹೋಳಿ ಹಬ್ಬದ ಸಂಭ್ರಮದಲ್ಲೂ ಪುಂಡರು ಕಿಡಿಗೇಡಿತನ ಮೆರೆದಿದ್ದಾರೆ.
ಇತ್ತೀಚೆಗೆ ಕನ್ನಡ ಮಾತಾಡು ಎಂದಿದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದಿತ್ತು. ಇದೇ ಕಾರಣಕ್ಕೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಬಸ್‌ಗಳನ್ನು ಅಲ್ಲಿನ ಮರಾಠಿ ಪುಂಡರು ಟಾರ್ಗೆಟ್ ಮಾಡುತ್ತಿದ್ದಾರೆ