No menu items!
13.9 C
Munich
Sunday, May 24, 2026

ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂಒತ್ತುವರಿ ಆರೋಪ: ಒತ್ತುವರಿ ತೆರವಿಗೆ ಸಿದ್ಧತೆ!

Must read

ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂಒತ್ತುವರಿ ಆರೋಪ: ಒತ್ತುವರಿ ತೆರವಿಗೆ ಸಿದ್ಧತೆ!

ರಾಮನಗರ: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ‌ ಸದಸ್ಯರ ವಿರುದ್ಧ ಕೇಳಿಬಂದಿರುವ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದ ಸರ್ಕಾರಿ ಜಮೀನು ಕಬಳಿಸಿದ್ದಾರೆ ಎಂಬ ಆರೋಪ ಬಂದಿರುವ ಹಿನ್ನೆಲೆ ಕರ್ನಾಟಕ ಸರ್ಕಾರ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದೆ.
ಹೆಚ್ಡಿಕೆ ಕುಟುಂಬದ ವಿರುದ್ಧ ಕೇಳಿಬಂದಿರುವ ಭೂಒತ್ತುವರಿ ಆರೋಪ ಸಂಬಂಧ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ರಚನೆ ಮಾಡಿದ್ದರು. ಕೇತಗಾನಹಳ್ಳಿಯ ಸರ್ವೆ ನಂ.7, 8, 9, 10, 16, 17, 79ರಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಕಂದಾಯ ಇಲಾಖೆ, ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆದಿದೆ. ಇದೀಗ ಸರ್ಕಾರಕ್ಕೆ ಸರ್ವೆ ವರದಿ ಸಲ್ಲಿಸಿ ಒತ್ತುವರಿ ತೆರವು ಮಾಡಲು ಇಲಾಖೆ ಮುಂದಾಗಿದೆ. ಇಂದು ಕಂದಾಯ ಇಲಾಖೆ ಅಧಿಕಾರಿಗಳಿಂದ ಒತ್ತುವರಿ ತೆರವು ಸಾಧ್ಯತೆ ಇದೆ. ಒತ್ತುವರಿ ತೆರವಿಗೆ ಕುಮಾರಸ್ವಾಮಿ ತೋಟದ ಮನೆಯ ಮುಂದೆ ಎರಡು ಜೆಸಿಬಿಗಳು ಸಿದ್ಧವಾಗಿವೆ.

- Advertisement -spot_img

More articles

- Advertisement -spot_img

Latest article