9 ತಿಂಗಳ ಬಳಿಕ ಸುರಕ್ಷಿತವಾಗಿ ಭೂಮಿ ತಲುಪಿದ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್!
ವಾಷಿಂಗ್ಟನ್: ಅಂತರಿಕ್ಷದಲ್ಲಿ 9 ತಿಂಗಳು ಕಳೆದ ಸುನೀತಾ ವಿಲಿಯಮ್ಸ್ ಬುಚ್ ವಿಲ್ಮೋರ್ ಯಶಸ್ವಿಯಾಗಿ ಭೂಮಿಗೆ ಇಳಿದಿದ್ದಾರೆ. ಭಾರತೀಯ ಕಾಲಮಾನ ಮಂಗಳವಾರ ಬೆಳಗ್ಗೆ 10.35ಕ್ಕೆ ಸರಿಯಾಗಿ ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟ ಕ್ರೂ ಡ್ರ್ಯಾಗನ್ ಗಗನನೌಕೆತನ್ನ 17 ಗಂಟೆಗಳ ಪಯಣವನ್ನು ಆರಂಭಿಸಿ ಅಮೆರಿಕದ ಕಾಲಮಾನದ ಪ್ರಕಾರ ಮಂಗಳವಾರ ಸಂಜೆ 5:57ಕ್ಕೆ (ಭಾರತೀಯ ಕಾಲಮಾನ
ಬುಧವಾರ ಬೆಳಗ್ಗೆ 3:27ಕ್ಕೆ) ಸರಿಯಾಗಿ ಫ್ಲೋರಿಡಾ ಕಡಲ ತೀರದಲ್ಲಿ ಲ್ಯಾಂಡ್ ಆಗಿದೆ. ನಾಸಾ ಗಗನಯಾನಿ ನಿಕ್ ಹೇಗ್, ರಷ್ಯಾದ ಅಲೆಕ್ಸಾಂಡರ್ ಗೊರ್ಚನೋವ್ ಜೊತೆಗೂಡಿ ಸುನಿತಾ ಮತ್ತು ವಿಲ್ಮೋರ್ ಯಶಸ್ವಿಯಾಗಿ ಭೂಮಿಗೆ ಬಂದಿದ್ದಾರೆ.
ನೌಕೆಯಿಂದ ಹೊರ ಬಂದ ಯಾನಿಗಳನ್ನು ಟೆಕ್ಸಾಸ್‌ನ ಹೂಸ್ಟನ್‌ನಲ್ಲಿರುವ ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರಕ್ಕೆ ಸಾಗಿಸಲಾಗಿದೆ. ಅಲ್ಲಿ ಅವರು ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಾರೆ. ಗಗನ ಯಾತ್ರಿಗಳು ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾಗಿದೆ.