ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದೊಡ್ಡ ಹಗರಣಗಳು ಬಯಲಿಗೆ ಬರುತ್ತಿದೆ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದೊಡ್ಡ ಹಗರಣಗಳು ಬಯಲಿಗೆ ಬರುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದೊಡ್ಡ ಹಗರಣಗಳು ಬಯಲಿಗೆ ಬರುತ್ತಿದೆ. ಜನ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ಸರ್ಕಾರದಲ್ಲಿ ಸ್ಮಾರ್ಟ್ ಮೀಟರ್ ಹಗರಣ ನಡೆದಿದೆ.
ಇದರ ಟೆಂಡರ್ ಪ್ರಕ್ರಿಯೆ ಸರಿಯಾಗಿ ಆಗಿಲ್ಲ. ಸದನದಲ್ಲೂ ಈ ಹಗರಣ ಬಗ್ಗೆ ಪ್ರಸ್ತಾಪ ಆಗಿದೆ. ಹಲವಾರು ರಾಜ್ಯಗಳು ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಿವೆ. ಕೇಂದ್ರ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಕೆ ಬಗ್ಗೆ ಸೂಚನೆ ನೀಡಿತ್ತು. ಕೇಂದ್ರ ಸರ್ಕಾರ ಸ್ಮಾರ್ಟ್ ಮೀಟರ್‌ಗೆ ಸಬ್ಸಿಡಿ ಕೊಡುತ್ತಿದೆ. ಈಗಾಗಲೇ ದೇಶದಲ್ಲಿ 19 ಕೋಟಿಯಷ್ಟು ಸ್ಮಾರ್ಟ್ ಮೀಟರ್ ಅಳವಡಿಸಲಾಗಿದೆ ಎಂದರು.