No menu items!
18.4 C
Munich
Friday, August 21, 2026

ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಛಲವಾದಿ ನಾರಾಯಣಸ್ವಾಮಿ

Must read

ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಛಲವಾದಿ ನಾರಾಯಣಸ್ವಾಮಿ

ರಾಮನಗರ: ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಬಗ್ಗೆ ಡಿಕೆಶಿ ಮಾತನಾಡಿದರೂ ದಲಿತ ಸಂಘಟನೆಗಳು ಡಿಕೆಶಿ ವಿರುದ್ಧ ಮಾತನಾಡುತ್ತಿಲ್ಲ.
ಕಾಂಗ್ರೆಸ್ ಆಡಳಿತದಲ್ಲಿ ದಲಿತರಿಗೆ ಭಯ ಬಂದುಬಿಟ್ಟಿದೆ. ಕಾಂಗ್ರೆಸ್ ಏನೇ ಮಾತನಾಡಿದರೂ ಸುಮ್ಮನಿರುತ್ತಾರೆ. ಕಾಂಗ್ರೆಸ್ ಸುಡುವ ಮನೆ, ಇದರಲ್ಲಿ ಭವಿಷ್ಯ ಇಲ್ಲ ಅಂತ ಅಂಬೇಡ್ಕರ್ ಹೇಳಿದ್ದರು.
ದಲಿತರು ಹೆದರಿಕೊಂಡು ಬದುಕುತ್ತಿದ್ದಾರೆ. ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಯಾರೇ ಮಾತನಾಡಿದರೂ ಧೈರ್ಯವಾಗಿ ವಿರೋಧಿಸಿ. ಯಾವುದೇ ಪಕ್ಷ ಆದರೂ ಸರಿಯೇ ವಿರೋಧಿಸಿ ಎಂದು ಮನವಿ ಮಾಡಿದರು.

- Advertisement -spot_img

More articles

- Advertisement -spot_img

Latest article