ಮುಂಬೈನಲ್ಲಿರುವ ಪ್ರಖ್ಯಾತ ಹಾಜಿ ಅಲ್ ದರ್ಗಾದ ಒಳಗೆ ಮಹಿಳೆಯರಿಗೂ ಪ್ರವೇಶ ನೀಡಲಾಗುವುದು ಎಂದು ಸಂಸ್ಥೆಯ ಅಧಿಕಾರಿಗಳು ಸುಪ್ರೀಕೋರ್ಟ್‍ಗೆ ತಿಳಿಸಿದೆ. ಈ ಕುರಿತಾಗಿ ಸಂಸ್ಥೆಯ ಕೆಲವೊಂದು ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತಮಗೆ ಒಂದು ತಿಂಗಳ ಕಾಲಾವಕಾಶ ನೀಡಬೇಕೆಂದು ಸುಪ್ರೀಂಗೆ ಮನವಿ ಮಾಡಿಕೊಂಡಿದ್ದಾರೆ. ಮಸೀದಿ ಪ್ರವೇಶಕ್ಕೆ ಪುರುಷರಂತೆ ಮಹಿಳೆಯರಿಗೂ ಸೂಕ್ತ ಅವಕಾಶವನ್ನು ನೀಡಬೇಕು ಎಂದು ಬಾಂಬೈ ಹೈಕೋರ್ಟ್‍ನ ಆದೇಶದ ವಿರುದ್ದ ಹಾಜಿ ಟ್ರಸ್ಟ್ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಕೋರ್ಟ್ ಅವರ ಮೇಲ್ಮನವಿಯನ್ನು ವಿಲೇವಾರಿ ಮಾಡಿ ಬಾಂಬೆ ಹೈಕೋರ್ಟ್‍ನ ಆದೇಶವನ್ನು ಪಾಲಿಸಬೇಕು ಎಂದು ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಟಿಎಸ್ ಠಾಕೂರ್ ಹಾಗೂ ನ್ಯಾಯಮೂರ್ತಿಗಳಾದ ಡಿ.ವೈ ಚದ್ರಚೂಡ ಮತ್ತು ಎಲ್. ನಾಗೇಶ್ವರ ರಾವ್ ಅವರಿದ್ದ ಪೀಠವು ಇಂದು ಮೇಲ್ಮನವಿ ವಿಚಾರಣೆ ನಡೆಸಿತು. ಹಿರಿಯ ವಕೀಲ ಗೋಪಾಲ ಸುಬ್ರಮಣ್ಯ ಟ್ರಸ್ಟ್ ಪರವಾಗಿ ವಾದ ಮಂಡಿಸಿದ್ದರು. ಆದರೆ ಕೋರ್ಟ್ ಮಹಿಳೆಯರಿಗೂ ಪವಿತ್ರ ಸ್ಥಳ ದರ್ಗಾಗೆ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ತಿಳಿಸಿದೆ. ಈ ಕುರಿತಾಗಿ ಟ್ರಸ್ಟ್ ನಾಲ್ಕು ವಾರಗಳ ಕಾಲಾವಕಾಶ ಕೋರಿದೆ. ಇದಕ್ಕೆ ಸುಪ್ರೀಂ ಸಮ್ಮತಿಸಿದೆ.
Like us on Facebook The New India Times
POPULAR STORIES :
ತರ್ಲೆ ವಿಲೇಜ್ ಅಧಿಕೃತ ಟ್ರೈಲರ್ ರಿಲೀಸ್..!
ಎಲ್ಲಾ ಮಾಧ್ಯಮಗಳಿಗೆ ರಾಕಿಂಗ್ ಸ್ಟಾರ್ ಓಪನ್ ಚಾಲೆಂಜ್..! #Video
ಆ್ಯಪಲ್ ಕಂಪನಿಯ ಸಂಸ್ಥಾಪಕ ಸ್ಟೀವ್ ಜಾಬ್ಸ್ ನ ಕೊನೆಯ ಪತ್ರ
ಅಸಲಿಗೆ ‘ಒಳ್ಳೆಯ ಹುಡುಗ’ನ ಹೆಸರು ಪ್ರಥಮ್ ಅಲ್ಲ..! ಮತ್ತೇನು?
ಮೊಬೈಲ್ ಚಾರ್ಜರನ್ನು ವೈರ್‍ಲೆಸ್ ಚಾರ್ಜರ್ ಆಗಿ ಮಾಡೋ ಸಿಂಪಲ್ ವಿಧಾನ..!