ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

Date:

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

ಆನೇಕಲ್: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ. ಮಂಜ ಅಲಿಯಾಸ್ ನೇಪಾಳಿ ಮಂಜ ಹತ್ಯೆಯಾದ ರೌಡಿಶೀಟರ್‌ ಎಂದು ಗುರುತಿಸಲಾಗಿದೆ, ಹಬ್ಬದ ದಿನ ಎಣ್ಣೆ ಪಾರ್ಟಿಗೆ ಹೋಗಿದ್ದ ವೇಳೆ ರಡು ಬೈಕ್‍ನಲ್ಲಿ ಬಂದ ಹಂತಕರ ಗುಂಪು ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಹಳೇ ದ್ವೇಷದ ಹಿನ್ನೆಲೆ ಹೆಬ್ಬಗೋಡಿ ರೌಡಿಶೀಟರ್ ಜಗ್ಗ ಅಲಿಯಾಸ್ ಜಗದೀಶ್ ಮತ್ತವನ ಗ್ಯಾಂಗ್ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಲಾಂಗು ಮಚ್ಚುಗಳಿಂದ ತಲೆ, ಹೊಟ್ಟೆ, ಎದೆ ಕೈಗಳು ಹೀಗೆ ಸಿಕ್ಕ ಸಿಕ್ಕ ಕಡೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಎರಡು ಕೊಲೆ ಸೇರಿದಂತೆ ಕೊಲೆ ಯತ್ನ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮೃತ ನೇಪಾಳಿ ಮಂಜ ಪ್ರಮುಖ ಆರೋಪಿಯಾಗಿದ್ದ. ಎರಡು ಬಾರಿ ಗೂಂಡಾ ಕಾಯ್ದೆ ಅಡಿ ಆತನನ್ನು ಬಂಧಿಸಲಾಗಿತ್ತು. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...