ನಾಳೆ ಆರ್ಸಿಬಿ vs ಗುಜರಾತ್ ನಡುವೆ ಹಣಾಹಣಿ! ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ..! ಇಲ್ಲಿ ವಾಹನಗಳ ನಿಲುಗಡೆ ನಿಷೇಧ

Date:

ನಾಳೆ ಆರ್ಸಿಬಿ vs ಗುಜರಾತ್ ನಡುವೆ ಹಣಾಹಣಿ! ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ..! ಇಲ್ಲಿ ವಾಹನಗಳ ನಿಲುಗಡೆ ನಿಷೇಧ

 

ಬೆಂಗಳೂರು: ಐಪಿಎಲ್ 2025ರ ಆವೃತ್ತಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮೂರನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಈ ಪಂದ್ಯ ಎರಡು ತಂಡಗಳಿಗೂ ಪ್ರಮುಖವಾಗಿದೆ. ಬೆಂಗಳೂರಿನಲ್ಲಿ ಮ್ಯಾಚ್ ನಡೆಯುವ ಕಾರಣ ಆರ್‌ಸಿಬಿ ಅಭಿಮಾನಿಗಳು ಕೂಡ ಕಾತುರದಿಂದ ಎದುರು ನೋಡುತ್ತಿದ್ದಾರೆ.
ಈ ತಂಡಗಳು ಐಪಿಎಲ್ನಲ್ಲಿ 5 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ಆರ್ಸಿಬಿ ತಂಡ ಗುಜರಾತ್ ವಿರುದ್ಧ 3 ಬಾರಿ ಗೆದ್ದು ಮೇಲುಗೈ ಸಾಧಿಸಿದೆ. ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ತಂಡ 2 ಬಾರಿ ಜಯ ಗಳಿಸಿದೆ.
ಗುಜರಾತ್ ವಿರುದ್ಧ ಐಪಿಎಲ್ನಲ್ಲಿ ಆರ್ಸಿಬಿ ಗಳಿಸಿರುವ 206 ಹೈಸ್ಕೋರ್ ಆಗಿದೆ. 170 ಕಡಿಮೆ ಸ್ಕೋರ್ ಆಗಿದೆ. ಆರ್ಸಿಬಿ ವಿರುದ್ಧ ಗುಜರಾತ್ ಕಲೆಹಾಕಿರುವ 200 ಹೈಸ್ಕೋರ್ ಆಗಿದ್ದು 147 ಕಡಿಮೆ ಸ್ಕೋರ್ ಆಗಿದೆ.
ಇನ್ನೂ ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬುಧವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ. ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳ ಕೊರತೆ ಇರುವುದರಿಂದ ಬಿಎಂಟಿಸಿ,‌ ಮೆಟ್ರೋ ಬಳಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ಸ್ಥಳ ನಿಗದಿಪಡಿಸಲಾಗಿದೆ.
ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?
• ಕ್ವೀನ್ಸ್ ರಸ್ತೆಯಲ್ಲಿ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ ಪಾರ್ಕಿಂಗ್ ನಿಷೇಧಿಸಲಾಗಿದೆ.
• ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
• ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ನೋ ಪಾರ್ಕಿಂಗ್ ಇರಲಿದೆ.
• ರಾಜಭವನ ರಸ್ತೆಯ ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ ಪಾರ್ಕಿಂಗ್ಗೆ ಅನುಮತಿ ಇಲ್ಲ.
• ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ ನೋ ಪಾರ್ಕಿಂಗ್.
• ಕಬ್ಬನ್ ರಸ್ತೆಯಲ್ಲಿ ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ ವಾಹನ ನಿಲುಗಡೆಗೆ ಅವಕಾಶ ಇಲ್ಲ.
• ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ ಪಾರ್ಕಿಂಗ್ ಮಾಡುವಂತಿಲ್ಲ.
• ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದ ವರೆಗೆ ಪಾರ್ಕಿಂಗ್ಗೆ ಅನುಮತಿಸಲಾಗುವುದಿಲ್ಲ.
• ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ ನೋ ಪಾರ್ಕಿಂಗ್.
• ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ ವಾಹನ ನಿಲುಗಡೆ ನಿಷೇಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...