ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ, ಅದಕ್ಕಾಗಿ ಬೆಲೆ ಏರಿಕೆ ಮಾಡಿದ್ದಾರೆ: ಆರ್ ಅಶೋಕ್
ಬೆಂಗಳೂರು: ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ, ಅದಕ್ಕಾಗಿ ಬೆಲೆ ಏರಿಕೆ ಮಾಡಿದ್ದಾರೆಂದು ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ 136 ಜನ ಕಳ್ಳರು ಇದ್ದಾರೆ. ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ. ಅದಕ್ಕಾಗಿ ಬೆಲೆ ಏರಿಕೆ ಮೂಲಕ ಲೂಟಿ ಮಾಡಲಾಗುತ್ತಿದೆ ಎಂದರು.
ಸಚಿವರು ಅಂಗಡಿ ತೆರೆದಿದ್ದಾರೆ. 40% ಆರೋಪಕ್ಕೆ ಸಾಕ್ಷಿ ಇಲ್ಲ. ಆದರೆ ಕಾಂಗ್ರೆಸ್ ಸರ್ಕಾರ 60% ಕಮಿಷನ್ ಪಡೆದುಕೊಳ್ಳುತ್ತಿದೆ. ಸ್ಮಾರ್ಟ್ ಮೀಟರ್ ನಲ್ಲಿ 15,000 ಹಗರಣ ನಡೆದಿದೆ. ಸಿದ್ದರಾಮಯ್ಯ ಹೆಸರಿಗಷ್ಟೇ ಸಿಎಂ. ಸರ್ಕಾರದ ಗಾಲಿ ಕುರ್ಚಿಯಲ್ಲಿದೆ ಎಂದು ಕಿಡಿಕಾರಿದರು.