ನಿಯಂತ್ರಣ ತಪ್ಪಿ ಬೈಕ್ ಪಲ್ಟಿ: ಮಹಿಳೆ ಸಾವು
ತುಮಕೂರು: ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡಿದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ರುದ್ರಾಪುರ ಗ್ರಾಮದವರಾದ ಪೂರ್ಣಿಮಾ 30 ಮೃತ ಮಹಿಳೆಯಾಗಿದ್ದು, ನೂತನವಾಗಿ ನಿರ್ಮಾಣವಾಗಿರುವ ಬ್ರಿಡ್ಜ್ ನಲ್ಲಿ ಅವೈಜ್ಞಾನಿಕವಾಗಿ ಉಬ್ಬು ಇರುವ ಕಾರಣ ಅಪಘಾತವಾಗಿರುವ ಶಂಕೆಯಾಗಿದ್ದು, ಮತ್ತೋರ್ವ ಬೈಕ್ ಸವಾರನಿಗೆ ಗಾಯವಾಗಿದ್ದು, ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡಿದಿದೆ.