ಡಿ.ಕೆ.ಶಿವಕುಮಾರ್ ಸಿಎಂ ಆಗಲು ಕಮಿಷನ್ ಸಂಗ್ರಹಿಸುತ್ತಿದ್ದಾರೆ: ಆರ್.ಅಶೋಕ್ ಆರೋಪ
ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗಲು ಕಮಿಷನ್ ಸಂಗ್ರಹಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರವೇ ನಮ್ಮ ಬಂಧು ಬಳಗ ಎಂದು ಕಾಂಗ್ರೆಸ್ ಘೋಷಣೆ ಮಾಡಿಕೊಳ್ಳಬೇಕು. ಸಿಎಂ ರಾಜೀನಾಮೆ ನೀಡದೇ ಇರಲು ಕಮಿಷನ್ ವಸೂಲಿ ಮಾಡುತ್ತಿದ್ದಾರೆ.
ಡಿ.ಕೆ.ಶಿವಕುಮಾರ್ ಸಿಎಂ ಆಗಲು ಕಮಿಷನ್ ಸಂಗ್ರಹಿಸುತ್ತಿದ್ದಾರೆ. ಸಚಿವರು ಕೂಡ ಸಿಎಂ ಆಗಲು ಕಮಿಷನ್ ಮಾಡುತ್ತಿದ್ದಾರೆ. ವಿಧಾನಸೌಧದ ಸಚಿವರ ಕಚೇರಿಗಳು ಕಲೆಕ್ಷನ್ ಸೆಂಟರ್ ಆಗಿದೆ. ಜೊತೆಗೆ ಜನರ ಮೇಲೆ 80 ಸಾವಿರ ಕೋಟಿ ರೂ. ತೆರಿಗೆ ಹಾಕಿದ್ದಾರೆ ಎಂದು ದೂರಿದರು.
ಇನ್ನೂ ಬಾಬಾ ಸಾಹೇಬ್ ಅಂಬೇಡ್ಕರ್‌ರ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್ ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ ಮಾಡುತ್ತಾರೆ ಎಂದು ದೂರಿದರು.