ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ
ರಾಮನಗರ: ಪ್ರಯಾಣಿಕರಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಅಪಘಾತಕ್ಕೀಡಾದ ಘಟನೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ.
ಕ್ಯಾಂಟರ್ ಪಂಕ್ಚರ್ ಆಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿತ್ತು. ಇದನ್ನು ಗಮನಿಸದೇ ಚಾಲಕ ಬಸ್ ಚಲಾಯಿಸಿಕೊಂಡು ಬಂದಿದ್ದಾನೆ. ಪರಿಣಾಮ ಬಸ್ ಕ್ಯಾಂಟರ್‍ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.