ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ?: ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

Date:

ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ?: ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ,
ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಎಂದು ಶಂಕೆ ವ್ಯಕ್ತಪಡಿಸಿರುವ ಅವರು; ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು (!?) ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ! ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ!! ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕೆ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದು ಅವರು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...