ಮಚ್ಚು ಹಿಡಿದು ರೀಲ್ಸ್ ಕೇಸ್: ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ ಮತ್ತೆ ಬಂಧನ!
ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು, ಆದರೆ ಈಗ ಕೋರ್ಟ್ಗೆ ಹಾಜರಾಗದ ಕಾರಣ ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಇಂದು ವಿಚಾರಣೆಗೆ ಹಾಜರಾಗಿರುವ ರಜತ್ ಕಿಶನ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ರೀಲ್ಸ್ ಕೇಸ್‌ನಲ್ಲಿ ಈಗಾಗಲೇ ರಜತ್ ಅವರು ಒಮ್ಮೆ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದುರ. ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದ ಹಿನ್ನೆಲೆಯಲ್ಲಿ ರಿಲೀಸ್ ಆಗಿದ್ದರು. ಪ್ರಕರಣದಲ್ಲಿ ಜಾಮೀನು ನೀಡಿದ್ದ ನ್ಯಾಯಾಲಯ ಪ್ರತಿ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು. ಆದ್ರೆ ರಜತ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿ ರಜತ್ ವಿರುದ್ಧ ವಾರೆಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ರಜತ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ರಜತ್ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಇಂದು ಮಧ್ಯಾಹ್ನ 1 ಗಂಟೆ ವೇಳೆಗೆ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.