ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿಯದ್ದು ದ್ವೇಷದ ರಾಜಕಾರಣ – ಸಿಎಂ ಸಿದ್ದರಾಮಯ್ಯ
ಕಲುಬುರಗಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಎಂದರು.
ಇನ್ನೂ ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು.