ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿಯ ಬಂಧನ
ಬೆಂಗಳೂರು: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬಿಚ್ಚಿಬೀಳಿಸಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ, ಬಳಿಕ ಸಾಂತ್ವಾನ ಕೇಂದ್ರದಲ್ಲಿ ಇರಿಸಲಾಗಿತ್ತು. ಇದೀಗ ಪೊಲೀಸರು ಪಲ್ಲವಿಯವರನ್ನು ಬಂಧಿಸಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪಲ್ಲವಿ, ಪುತ್ರಿ ಕೃತಿ, ಪುತ್ರ ಕಾರ್ತಿಕೇಶ್ ಸೇರಿದಂತೆ ಕುಟುಂಬಸ್ಥರು ಮತ್ತು ಸಂಬಂಧಿಕರ ಹೇಳಿಕೆಯನ್ನು HSR ಲೇಔಟ್ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಜೊತೆಗೆ ಒಟ್ಟು ಮೂರು ಮೊಬೈಲ್ ಸೀಜ್ ಮಾಡಿದ್ದಾರೆ. ಪಲ್ಲವಿ ಕೊಲೆ ರಹಸ್ಯ ಬಿಚ್ಚಿಟ್ಟಿದ್ದಾರೆ.
ಮೊದಲು ಓಂ ಪ್ರಕಾಶ್ ಮೇಲೆ ಖಾರದ ಪುಡಿ ಎರಚಿ, ಬಳಿಕ ಅಡುಗೆ ಎಣ್ಣೆಯನ್ನೂ ಸುರಿದಿದ್ದಾರೆ. ಕೈ ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದ್ದಾಗಿ ಪಲ್ಲವಿ ಮಾಹಿತಿ ನೀಡಿದ್ದಾರೆ. ಓಂ ಪ್ರಕಾಶ್ಗೆ 8-10 ಬಾರಿ ಇರಿಯಲಾಗಿದ್ದು, ಎದೆ, ಹೊಟ್ಟೆ, ಕೈಗೆ ಚಾಕುವಿನಿಂದ ಇರಿಯಲಾಗಿದೆ. ಹೊಟ್ಟೆ ಭಾಗಕ್ಕೆ 4-5 ಬಾರಿ ಇರಿದು ಹತ್ಯೆಗೈಯಲಾಗಿದೆ.