ಪಹಲ್ಗಾಮ್ ಉಗ್ರದಾಳಿಗೆ ಬೆಂಗಳೂರು ಟೆಕ್ಕಿ ಭರತ್ ಭೂಷಣ್ ಬಲಿ!

Date:

ಪಹಲ್ಗಾಮ್ ಉಗ್ರದಾಳಿಗೆ ಬೆಂಗಳೂರು ಟೆಕ್ಕಿ ಭರತ್ ಭೂಷಣ್ ಬಲಿ!

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರಿಂದ ದಾಳಿ ನಡೆದಿದೆ. ಉಗ್ರರ ಅಟ್ಟಹಾಸಕ್ಕೆ ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದೆ. ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿ, ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.
ಕಳೆದ ಶುಕ್ರವಾರ ಬೆಂಗಳೂರಿನಿಂದ ವೆಕೆಷನ್ಗಾಗಿ ಭರತ್ ಭೂಷಣ್, ಪತ್ನಿ, ಹಾಗೂ ಮೂರು ವರ್ಷದ ಮಗ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ನಾಲ್ಕೈದು ದಿನಕ್ಕೆ ಪ್ರವಾಸಕ್ಕೆ ತೆರಳಿದ್ದ ಕುಟುಂಬ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಮಂಗಳವಾರ ನಡೆದ ಉಗ್ರರ ಗುಂಡಿನ ದಾಳಿಯಿಂದ ಭರತ್ ಭೂಷಣ್ ಸಾವನ್ನಪ್ಪಿದ್ದಾರೆ.
ಪಹಲ್ಗಾಮ್ನಲ್ಲಿ ಪ್ರವಾಸದಲ್ಲಿದ್ದ ವೇಳೆ ಮಂಗಳವಾರ ಮಧ್ಯಾಹ್ನ ಏಕಾಏಕಿ ಉಗ್ರರ ದಾಳಿ ನಡೆದಿದೆ. ಈ ವೇಳೆ ದಾಳಿಯಾದ ಸ್ಥಳದಲ್ಲೇ ಇದ್ದ ಭೂಷಣ್ ಕುಟುಂಬ, ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದಾರೆ. ಅಲ್ಲೇ ಇದ್ದ ಮರವೊಂದರ ಬಳಿ ಮಗು ಜೊತೆ ಅವಿತುಕುಳಿತಿದ್ದ ಭರತ್ ಭೂಷಣ್ಗೆ ಉಗ್ರರು ನೇರ ಶೂಟ್ ಮಾಡಿದ್ದಾರೆ. ಬುಲೆಟ್ ನೇರ ಭೂಷಣ್ ತಲೆಗೆ ಬಿದ್ದಿದ್ದು, ಸ್ಥಳದಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕೂಡಲೇ ಭೂಷಣ್ ಪರಿಶೀಲಿಸಿದ ಪತ್ನಿ, ಭೂಷಣ್ ಸಾವನ್ನಪ್ಪಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ ಎಷ್ಟಿದೆ ನೋಡಿ

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ...

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಮೂಸಂಬಿ ಜ್ಯೂಸ್​​ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?

ಮೂಸಂಬಿ ಜ್ಯೂಸ್​​ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ? ಮೂಸಂಬಿ ಹಣ್ಣು ಯಾವ...

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...