ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರ ರೇಖಾಚಿತ್ರ ರಿಲೀಸ್.!
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಪ್ರವಾಸಿ ತಾಣ ಬೈಸರನ್‌ನಲ್ಲಿ ನಿನ್ನೆ ಉಗ್ರರು ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಸುಮಾರು 27 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದ ಒಬ್ಬರು ಸಹ ನಿನ್ನೆಯ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇಡೀ ದೇಶವೇ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದೆ.
ಇದೀಗ ಭೀಕರ ಹತ್ಯಾಕಾಂಡದಲ್ಲಿ ಭಾಗಿಯಾಗಿರುವ 3 ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಭೀಕರ ಭಯೋತ್ಪಾದಕ ದಾಳಿಯಲ್ಲಿ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಭಾಗಿಯಾಗಿದ್ದಾರೆಂದು ಶಂಕಿಸಲಾಗಿದೆ.
ಭದ್ರತಾ ಪಡೆಗಳು ಬೃಹತ್ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಮತ್ತು ಅರಣ್ಯ ಪ್ರದೇಶವನ್ನು ಬಳಸಿಕೊಂಡು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಭಯೋತ್ಪಾದಕರನ್ನು ಪತ್ತೆಹಚ್ಚಲು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿವೆ.