ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು: ಸಚಿವ ಕೆ. ಹೆಚ್. ಮುನಿಯಪ್ಪ
ಬೆಳಗಾವಿ: ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಕೆ. ಹೆಚ್. ಮುನಿಯಪ್ಪ ಒತ್ತಾಯ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು,
ಕೇಂದ್ರ ಸರ್ಕಾರದ ಬೆಲೆ ಏರಿಕೆಯ ವಿರುದ್ಧ ನಾವು ಪ್ರತಿಭಟಿಸುತ್ತಿದ್ದೇವೆ. ಕೇಂದ್ರವು ಎಲ್ಲದರ ಮೇಲೂ ಬೆಲೆ ಏರಿಕೆ ಮಾಡಿದೆ. ಇದರ ಅವಶ್ಯಕತೆ ಏನಿದೆ?. ಇದರ ಹಣ ಎಲ್ಲಿ ಹೋಗುತ್ತಿದೆ ಎಂದು ಕಾರಣ ಕೊಡಬೇಕು. ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಇನ್ನೂ ದೇಶದಲ್ಲಿ ಇಂಥ ಘಟನೆಗಳು ಆಗಬಾರದು. ಇಂಥ ಘಟನೆಗಳು ಸಂಭವಿಸಿದಾಗ ಖಂಡಿಸಬೇಕಿತ್ತು. ಇದನ್ನು ಖಂಡಿಸಿರುವ ಕೇಂದ್ರ ಸರ್ಕಾರ ಭಯೋತ್ಪಾದಕರ ಮೇಲೆ ಕ್ರಮ ಜರುಗಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಯುದ್ಧ ಬೇಡ ಎಂದು ನೀಡಿದ ಹೇಳಿಕೆಗೆ ಅವರೇ ನಿನ್ನೆ ಉತ್ತರ ಕೊಟ್ಟಿದ್ದಾರೆ. ಇದರಲ್ಲಿ ರಾಜಕೀಯ ಮಾಡಬಾರದು ಎಂದರು.