ಪಹಲ್ಗಾಮ್ ದಾಳಿ: ಕೇಂದ್ರದ ಎಲ್ಲಾ ನಿರ್ಣಯಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ – ಹೆಚ್.ಡಿ.ದೇವೇಗೌಡ
ಬೆಂಗಳೂರು: ಕೇಂದ್ರದ ಎಲ್ಲಾ ನಿರ್ಣಯಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಪ್ರವಾಸಿಗರ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಪಾಕಿಸ್ತಾನದ ಬೆಂಬಲದಿಂದ ಮಾಡಿದ್ದಾರೆ ಎಂಬ ಮಾಹಿತಿ ಕೇಂದ್ರದ ಬಳಿ ಇದೆ.
ಇಡೀ ದೇಶದ ಎಲ್ಲಾ 140 ಕೋಟಿ ಜನರು ಈ ವಿಷಯದಲ್ಲಿ ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ನೇತೃತ್ವದಲ್ಲಿ ಯಾವ ಕ್ರಮ ತೆಗೆದುಕೊಳ್ಳುತ್ತಾರೋ ಅದಕ್ಕೆ ಎಲ್ಲರೂ ಬೆಂಬಲ ಕೊಡಬೇಕು. ಒಂದೇ ಧ್ವನಿಯಲ್ಲಿ ಬೆಂಬಲ ಕೊಡಬೇಕು ಎಂದರು.
ನಾನು ರಾಜಕೀಯ ಪಕ್ಷದ ನಾಯಕ, ಎನ್‌ಡಿಎ ಮುಖಂಡನಾಗಿ ಹೇಳುತ್ತೇನೆ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ. ಕೇಂದ್ರದ ಎಲ್ಲಾ ನಿರ್ಣಯಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ಈ ವಿಷಯದಲ್ಲಿ ತೆಗೆದುಕೊಳ್ಳುವ ಎಲ್ಲಾ ನಿರ್ಣಯಕ್ಕೆ ನಮ್ಮ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.