ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್‌ ಆದೇಶ‌

Date:

ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್‌ ಆದೇಶ‌

ಬೆಂಗಳೂರು: ಬೈಕ್‌ ಟ್ಯಾಕ್ಸಿ ಸೇವೆಯನ್ನು ಮುಂದಿನ 6 ವಾರಗಳಲ್ಲಿ ಸ್ಥಗಿತಗೊಳಿಸುವಂತೆ ರ್ಯಾಪಿಡೋ, ಓಲಾ, ಉಬರ್‌ ಸೇರಿದಂತೆ ಇತರೆ ಬೈಕ್‌ ಸೇವೆ ಕಂಪನಿಗಳಿಗೆ ಕರ್ನಾಟಕ ಹೈಕೋರ್ಟ್‌ ಸೂಚನೆ ನೀಡಿತ್ತು. ಆದ್ರೆ ಇದೀಗ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಯನ್ನು ಮುಂದುವರೆಸಲು ನಿರ್ದೇಶನ ಕೋರಿ ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸ್‌ ಲಿಮಿಟೆಡ್ ಸೇರಿದಂತೆ ಇತರೆ ಕಂಪನಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಪರಿಗಣಿಸಿ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರಿದ್ದ ನ್ಯಾಯಪೀಠದಿಂದ ಆದೇಶ ಹೊರಡಿಸಲಾಗಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ರೋಪೆನ್ ಟ್ರಾನ್ಸ್‌ಫರ್ಮೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಪ್ರಕಾರ, ಕರ್ನಾಟಕದಲ್ಲಿ ಆರು ಲಕ್ಷಕ್ಕೂ ಹೆಚ್ಚು ನೋಂದಾಯಿತ ಬೈಕ್ ಟ್ಯಾಕ್ಸಿಗಳಿದ್ದು, ಆ ಮೂಲಕ ಸವಾರರು ತನ್ನ ಜೀವನ ನಡೆಸುತ್ತಿದ್ದಾರೆ. ಒಂದು ವೇಳೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದರೇ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಬಹುದು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರವು ಪ್ರಸ್ತುತ ಬೈಕ್ ಟ್ಯಾಕ್ಸಿಗಳಿಗಾಗಿ ಸಮಗ್ರ ನೀತಿಯನ್ನು ರೂಪಿಸುತ್ತಿದೆ. ಕೈಗೆಟುಕುವ ಬೆಲೆ ಮತ್ತು ಬೇಡಿಕೆ ಹಿನ್ನೆಲೆ ಬೈಕ್ ಟ್ಯಾಕ್ಸಿ ಸೇವೆಗಳು ನಗರ ಪ್ರದೇಶದಲ್ಲಿ ಹೆಚ್ಚುತ್ತಿವೆ. ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರ ವರೆಗೆ ನಡೆಸಲು ವಿಸ್ತರಣೆ ಮಾಡಿ ವಿಚಾರಣೆ ಮುಂದೂಡಿದೆ.

Share post:

Subscribe

spot_imgspot_img

Popular

More like this
Related

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ ಎಷ್ಟಿದೆ ನೋಡಿ

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ...

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಮೂಸಂಬಿ ಜ್ಯೂಸ್​​ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?

ಮೂಸಂಬಿ ಜ್ಯೂಸ್​​ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ? ಮೂಸಂಬಿ ಹಣ್ಣು ಯಾವ...

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...