ಜಾತಿಜನಗಣತಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಬಿವೈ ವಿಜಯೇಂದ್ರ
ಜಾತಿಜನಗಣತಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಕೇಂದ್ರದಿಂದ ಜಾತಿ ಆಧಾರಿತ ಜನಗಣತಿ ನಡೆಸುವ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರಗಳಿಗೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ. ಇದು ಗೊತ್ತಿದ್ರೂ ಸಿದ್ದರಾಮಯ್ಯ ಸರ್ಕಾರ ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿದೆ.
ಕೇಂದ್ರ ಸರ್ಕಾರ ಬಹಳ ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಜನಗಣತಿ ಜತೆಗೆ ಜಾತಿ ಜನಗಣತಿಯೂ ಮಾಡುವ ನಿರ್ಧಾರ ಮಾಡಲಾಗಿದೆ. 1931 ರ ನಂತರ ದೇಶದಲ್ಲಿ ಜಾತಿ ಜನಗಣತಿ ನಡೆದಿರಲಿಲ್ಲ. ಎಲ್ಲ ಸಮುದಾಯಗಳಿಗೂ ನ್ಯಾಯ ಸಿಗಬೇಕು ಅನ್ನೋದು ಮೋದಿಯವರ ಉದ್ದೇಶ. ಎಲ್ಲರೂ ಈ ನಿರ್ಧಾರ ಸ್ವಾಗತ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿ ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ ಕಾಂಗ್ರೆಸ್ ಮಾಡ್ತಿದೆ. ಕೇಂದ್ರದ ನಿರ್ಧಾರ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೂ ಅಚ್ಚರಿ ತಂದಿದೆ ಎಂದರು
ಖರ್ಗೆಯವರೇ ಹೇಳಿದ್ದಾರೆ ಇದು ಔಟ್‌ಡೇಟೆಡ್ ವರದಿ ಅಂತಾ. ಈಗಲಾದರೂ ರಾಜ್ಯದ ಜಾತಿ ಜನಗಣತಿಗೆ ಇತಿಶ್ರಿ ಹಾಡಲಿ. ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ಸೃಷ್ಟಿಸಲು ಹೊರಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಳಿ ಕಾಂತರಾಜು ವರದಿಯ ಪ್ರತಿಯೇ ಇಲ್ಲ. ಜಯಪ್ರಕಾಶ್ ಹೆಗ್ಡೆ ಯಾವ ಆಧಾರದಲ್ಲಿ ವರದಿ ಕೊಟ್ರು ಹಾಗಾದ್ರೆ? ಸಿದ್ದರಾಮಯ್ಯ ವರದಿಯಲ್ಲಿ ಸದುದ್ದೇಶವಂತೂ ಇಲ್ಲ. ಈಗಲಾದರೂ ಸಿದ್ದರಾಮಯ್ಯಗೆ ಭಗವಂತ ಬುದ್ಧಿ ಕೊಡಲಿ, ಕೇಂದ್ರದ ಪರ ಸಿದ್ದರಾಮಯ್ಯ ನಿಲ್ಲಲಿ ಎಂದು ತಿಳಿಸಿದರು.