ಇದೇ ತಿಂಗಳ 30ರಿಂದ ಈಶಾನ್ಯ ಮುಂಗಾರು ಆರಂಭವಾಗಲಿದ್ದು, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಕ್ಯಾಂಟ್ ಚಂಡಮಾರುತ ಬಂಗಾಳಕೊಲ್ಲಿಯ ಪೂರ್ವ ಭಾಗಗಳಿಂದ ತಿರುಗಿ ದಕ್ಷಿಣ ಭಾಗಕ್ಕೆ ಮುಖ ಮಾಡಿದ್ದು, ಇನ್ನು 72 ಗಂಟೆಗಳಲ್ಲಿ ಕ್ಯಾಂಟ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನು ದಕ್ಷಿಣ ಭಾರತದ ಭಾಗಗಳಲ್ಲಿ ಕ್ಯಾಂಟ್ ಚಂಡಮಾರುತ ಬೀಸುವ ಹಿನ್ನಲೆಯಲ್ಲಿ ವಿಶಾಖಪಟ್ಟಣ ಮತ್ತು ಮಚಲೀಪಟ್ಟಣದ ಜಿಲ್ಲಾಧಿಕಾರಿಗಳಿಗೆ ಆಂಧ್ರ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕೆಂದು ಆದೇಶ ನೀಡಿದೆ. ಇದೇ ವೇಳೆಯಲ್ಲಿ ಸಮುದ್ರದಲ್ಲಿ ಏರಿಳಿತಗಳು ಗೋಚರವಾಗುತ್ತಿರುವ ಹಿನ್ನಲೆಯಲ್ಲಿ ಮೀನುಗಾರರು ಅಕ್ಟೋಬರ್ 27ರಿಂದ ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
Like us on Facebook The New India Times
POPULAR STORIES :
ಭಾರತದ ಕಾಂಡೋಮ್ ಜಾಹೀರಾತಿಗೆ ಗೇಲ್, ಬ್ರಾವೋ ಸಖತ್ ಸ್ಟೆಪ್
ನಾಳೆ ಮುಕುಂದ ಮುರಾರಿಗೆ ಸಂತು ಸ್ಟ್ರೈಟ್ ಫಾರ್ವರ್ಡ್ ಚಾಲೆಂಜ್..!
ಧೋನಿಯ ಅದ್ಭುತ ರನ್ನೌಟ್ ವೀಡಿಯೋ ವೈರಲ್..!
ವೃತ್ತಿಯಲ್ಲಿ ವಾಟರ್ ಟ್ಯಾಂಕ್ ಡ್ರೈವರ್.. ದಕ್ಕಿದ್ದು ಮಿಸ್ಟರ್ ಏಷ್ಯಾ ಅವಾರ್ಡ್..!
ನಾಗೇಂದ್ರ ಪ್ರಸಾದ್ – ಶುಭಪೂಂಜ ಮದುವೆಯಾದ್ರು.!! ಇನ್‍ಸೈಡ್ ಸ್ಟೋರಿ ಏನು ಗೊತ್ತಾ..?
ದೊಡ್ಡ ನಾಲಿಗೆ ಮಗು..!! ನಗುವನ್ನ ಮರೆತ ಮನೆಯವರು..! ಈಗ ಹೇಗಿದೆ ಗೊತ್ತ ಈ ಪುಟ್ಟ ಜೀವ..?