ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಇವತ್ತಿನಿಂದ ಶುರುವಾಗಲಿದೆ: ಸಿಎಂ ಸಿದ್ದರಾಮಯ್ಯ

Date:

ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಇವತ್ತಿನಿಂದ ಶುರುವಾಗಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
“ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ.
ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ.
2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024 ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆವು.
ಆದಿ ದ್ರಾವೀಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯದಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ.
ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025
19-5-2025 ರಿಂದ 21-5-2025 ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು. ಮೂರನೇ ಹಂತದಲ್ಲಿ 19-5-2025 ರಿಂದ 22-5-2025 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...