ಭೀಕರ ರಸ್ತೆ ಅಪಘಾತ: ಲಾರಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು.!
ಹುಬ್ಬಳ್ಳಿ :ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ವೇತ (29), ಅಂಜಲಿ(26), ಸಂದೀಪ್ (26), ವಿಠ್ಠಲ (55) ಮತ್ತು ಶಶಿಕಲಾ ಮೃತರು.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದ ವೇಳೆ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು, ಮೃತದೇಹಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.