IPL 2025: RCBಗೆ ಆಘಾತ: ಟೂರ್ನಿಯಿಂದ ಹೊರಬಿದ್ದ ಪ್ರಮುಖ ಬ್ಯಾಟ್ಸ್‌ಮನ್!

Date:

IPL 2025: RCBಗೆ ಆಘಾತ: ಟೂರ್ನಿಯಿಂದ ಹೊರಬಿದ್ದ ಪ್ರಮುಖ ಬ್ಯಾಟ್ಸ್‌ಮನ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಸ್ಟಾರ್ ಬ್ಯಾಟರ್ ದೇವದತ್ ಪಡಿಕ್ಕಲ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಔಟ್ ಆಗಿದ್ದಾರೆ. ಹೌದು ಈ ಋತುವಿನಲ್ಲಿ ಆರ್‌ಸಿಬಿ ಪರ 10 ಪಂದ್ಯಗಳನ್ನು ಆಡಿದ್ದ ದೇವದತ್ ಪಡಿಕ್ಕಲ್, ಎರಡು ಅರ್ಧಶತಕಗಳೊಂದಿಗೆ 247 ರನ್ ಗಳಿಸಿದ್ದರು. ಆದರೆ, ಬಲಗೈ ಮಂಡಿರಜ್ಜು ಗಾಯದಿಂದಾಗಿ ಅವರು ಉಳಿದ ಪಂದ್ಯಗಳಿಂದ ಹೊರಗುಳಿಯಬೇಕಾದ ಸ್ಥಿತಿ ಬಂದಿದೆ. ಇದರಿಂದ ಆರ್‌ಸಿಬಿಗೆ ಬದಲಿ ಆಟಗಾರನ ಅಗತ್ಯವಿತ್ತು.
ಮಯಾಂಕ್ ಅಗರ್ವಾಲ್ ಅವರನ್ನು 1 ಕೋಟಿ ರೂಪಾಯಿಗೆ ಆರ್‌ಸಿಬಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಮಯಾಂಕ್ ಐಪಿಎಲ್‌ನಲ್ಲಿ ಈಗಾಗಲೇ 127 ಪಂದ್ಯಗಳನ್ನು ಆಡಿದ್ದು, 2661 ರನ್ ಗಳಿಸಿದ್ದಾರೆ. ಅವರ ಖಾತೆಯಲ್ಲಿ 1 ಶತಕ ಮತ್ತು 13 ಅರ್ಧಶತಕಗಳಿವೆ. ಅವರ ಅನುಭವ ಮತ್ತು ಬ್ಯಾಟಿಂಗ್ ಕೌಶಲ್ಯ ಆರ್‌ಸಿಬಿಯ ಬ್ಯಾಟಿಂಗ್ ಶಕ್ತಿಯನ್ನು ಇನ್ನಷ್ಟು ಬಲಪಡಿಸಲಿದೆ ಎಂದು ತಂಡ ಭಾವಿಸಿದೆ.
ವಾಸ್ತವವಾಗಿ ಈ ಸೀಸನ್ನಲ್ಲಿ ಪಡಿಕ್ಕಲ್ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು. ಆಡಿರುವ 10 ಪಂದ್ಯಗಳಲ್ಲಿ ಪಡಿಕ್ಕಲ್ 247 ರನ್‌ಗಳನ್ನು ಗಳಿಸಿದ್ದರು. ಇದರಲ್ಲಿ ಎರಡು ಅರ್ಧಶತಕಗಳನ್ನು ಬಾರಿಸಿದ್ದ ಪಡಿಕ್ಕಲ್, ಐಪಿಎಲ್ 2025 ರಲ್ಲಿ ಮೂರನೇ ಸ್ಥಾನದಲ್ಲಿ ಆರ್‌ಸಿಬಿ ಪರ ಪ್ರಮುಖ ಪಾತ್ರ ವಹಿಸುತ್ತಿದ್ದರು. ಅಂತಹ ಪರಿಸ್ಥಿತಿಯಲ್ಲಿ, ಅವರನ್ನು ಪಂದ್ಯಾವಳಿಯಿಂದ ಹೊರಗಿಡುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗುತ್ತಿದೆ. ಪಡಿಕ್ಕಲ್ ಮಂಡಿರಜ್ಜು ಗಾಯದಿಂದಾಗಿ ಬಳಲುತ್ತಿರುವ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...