ಕ್ಯಾಪ್ಸಿಕಂ ತಿನ್ನುವುದರಿಂದ ಆರೋಗ್ಯಕ್ಕೆ ಏನು ಪ್ರಯೋಜನವಿದೆ ಗೊತ್ತಾ..?

Date:

ಕ್ಯಾಪ್ಸಿಕಂ ತಿನ್ನುವುದರಿಂದ ಆರೋಗ್ಯಕ್ಕೆ ಏನು ಪ್ರಯೋಜನವಿದೆ ಗೊತ್ತಾ..?

ದೊಣ್ಣೆ ಮೆಣಸು ಯಾನೆ ಕ್ಯಾಪ್ಸಿಕಂ ರುಚಿಕರವಾಗಿರುವ ಜತೆಗೆ ಇದರಲ್ಲಿ ಹಲವಾರು ರೀತಿಯ ಆರೋಗ್ಯ ಲಾಭಗಳು ಕೂಡ ಇದೆ. ಈ ಮೆಣಸಿನಲ್ಲಿ ಇರುವಂತಹ ಪೋಷಕಾಂಶಗಳು ದೇಹವನ್ನು ಹಲವು ರೀತಿಯ ಕಾಯಿಲೆಗಳಿಂದ ರಕ್ಷಿಸುವುದು. ಕ್ಯಾಪ್ಸಿಕಂನಲ್ಲಿ ವಿಟಮಿನ್ ಸಿ, ಎ ಮತ್ತು ಬೆಟಾ ಕ್ಯಾರೋಟಿನ್ ಅಂಶವಿದೆ. ಇದು ಚರ್ಮಕ್ಕೆ ಬೇಕಾಗಿರುವಂತಹ ಪ್ರಮುಖ ಪೋಷಕಾಂಶಗಳು. ಕ್ಯಾಪ್ಸಿಕಂನಿಂದ ದೇಹಕ್ಕೆ ಸಿಗುವ ಆರೋಗ್ಯ ಲಾಭಗಳು ಯಾವುದು ಎಂದು ನಾವು ಇಲ್ಲಿ ತಿಳಿಯುವ.
ಕ್ಯಾಪ್ಸಿಕಂ ತಿನ್ನುವುದರಿಂದಾಗುವ ಪ್ರಯೋಜನಗಳು
1. ಕ್ಯಾಪ್ಸಿಕಂನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದಿಂದ ರಕ್ಷಿಸುವ ಪೋಷಕಾಂಶಗಳು ಸಮೃದ್ಧವಾಗಿವೆ. ಇದು ಗ್ಯಾಸ್ಟ್ರಿಕ್ ಸಮಸ್ಯೆ, ಕ್ಯಾನ್ಸರ್ ಅದರಲ್ಲೂ ಮುಖ್ಯವಾಗಿ ಅನ್ನನಾಳದ ಕ್ಯಾನ್ಸರ್, ಪ್ರಾಸ್ಟೇಟ್, ಗುಳ್ಳೆ, ಗರ್ಭ ಮತ್ತು ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತಾರೆ.
2. ಕ್ಯಾಪ್ಸಿಕಂನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಕಾಲಜನ್ ಅನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಕ್ಯಾಪ್ಸಿಕಂ ಸಂಧಿವಾತದ ಅಪಾಯವನ್ನು ಕಡಿಮೆ ಮಾಡುವುದರ ಜತೆಗೆ, ಜೀವಕೋಶಗಳನ್ನು ಆಕ್ಸಿಡೀಕರಣದ ಅಪಾಯದಿಂದ ರಕ್ಷಿಸುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ.
3. ಕ್ಯಾಪ್ಸಿಕಂನಲ್ಲಿ ಲೈಕೋಪೀನ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದು ಹೋಮೋಸಿಸ್ಟೈನ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಕ್ಯಾಪ್ಸಿಕಂ ಹೃದಯವನ್ನು ಆರೋಗ್ಯವಾಗಿರಿಸುವುದರ ಜತೆಗೆ ರಕ್ತದೊತ್ತಡವನ್ನೂ ನಿಯಂತ್ರಿಸುತ್ತದೆ.
4. ಕ್ಯಾಪ್ಸಿಕಂ ಜ್ಯೂಸ್ ಜಠರ ಮತ್ತು ಕರುಳಿನ ಕಾಯಿಲೆಗಳಾದ ಡಿಸ್ಪೆಪ್ಸಿಯಾ, ಅತಿಸಾರ ಮತ್ತು ಹುಣ್ಣುಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
5. ಕ್ಯಾಪ್ಸಿಕಂ ರಕ್ತದ ಹರಿವನ್ನು ಸುಧಾರಿಸುತ್ತದೆ. ಇದು ಕೂದಲು ಉದುರುವುದನ್ನು ಕಡಿಮೆ ಮಾಡುತ್ತದೆ. ಕ್ಯಾಪ್ಸಿಕಂ ಡೈಹೈಡ್ರೊ ಟೆಸ್ಟೋಸ್ಟೆರಾನ್ ಪರಿಣಾಮಗಳಿಂದ ಕೂದಲಿನ ಉದುರುವಿಕೆಯನ್ನು ನಿಯಂತ್ರಿಸುತ್ತದೆ.
6. ಕ್ಯಾಪ್ಸಿಕಂನಲ್ಲಿ ಬೀಟಾ ಕ್ಯಾರೋಟಿನ್ ಮತ್ತು ವಿಟಮಿನ್ ಸಿ ಅಧಿಕವಾಗಿರುತ್ತದೆ. ಇದು ಕಣ್ಣುಗಳ ದೃಷ್ಟಿ ಹೀನತೆಯನ್ನು ಕಡಿಮೆ ಮಾಡುತ್ತದೆ. ಅಲ್ಲದೆ ವಯಸ್ಸಾದಂತೆ ಉಂಟಾಗುವ ದೇಹಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸಹ ನಿಯಂತ್ರಿಸುತ್ತದೆ.

Share post:

Subscribe

spot_imgspot_img

Popular

More like this
Related

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ಮಂಗಳೂರು: ಮಹೇಶ್...

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ ಬೆಂಗಳೂರು:-ಕಲ್ಯಾಣ...

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...