ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಡೊನಾಲ್ಡ್ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ’ ಎಂದು ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಡೊನಾಲ್ಡ್ ಟ್ರಂಪ್, ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ
ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸುತ್ತಿದೆ ಎಂಬ ಟ್ರಂಪ್ ಹೇಳಿಕೆಯನ್ನು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಕೂಡ ಅನುಮೋದಿಸಿದ್ದಾರೆ.