Gold Rate: ಚಿನ್ನದ ಬೆಲೆ ಮತ್ತೆ ಗಗನಕ್ಕೆ: ಹಳದಿ ಲೋಹದ ನೂತನ ದರ ಪಟ್ಟಿ ಇಲ್ಲಿದೆ ನೋಡಿ
ಬೆಂಗಳೂರು: ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಮೇಲ್ಪಂಕ್ತಿಯಲ್ಲಿ ನಿಲ್ಲುವುದರಲ್ಲಿ ಸಂಶಯವಿಲ್ಲ. ಅದ್ರಲ್ಲೂ ಭಾರತ ಜಗತ್ತಿನಲ್ಲಿ ಅತಿಹೆಚ್ಚು ಚಿನ್ನ ಹೊಂದಿರುವ ದೇಶಗಳಲ್ಲಿ ಒಂದು. ಎಲ್ಲಾ ವರ್ಗದ ಜನರು ಆಸೆಪಟ್ಟು ಖರೀದಿಸುವ ವಸ್ತುಗಳಲ್ಲಿ ಬಂಗಾರ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನ ಪೈಸೆ ಪೈಸೆ ಕೂಡಿಟ್ಟು ಚಿನ್ನ ಕೊಳ್ಳೋದಕ್ಕೆ ಆದ್ಯತೆ ನೀಡುತ್ತಾರೆ.
ಚಿನ್ನ ಇವರ ಪಾಲಿಗೆ ಬರೀ ಚಿನ್ನವಾಗಿರದೇ, ಆಪತ್‌ಕಾಲದ ಬಂಧು ಕೂಡ ಹೌದು. ಯಾವುದೇ ಹಣದ ಸಮಸ್ಯೆ ಬಂದರೂ ಚಿನ್ನ ಅಡವಿಟ್ಟು, ಮಾರಿಯಾದರೂ ಹಣ ಪಡೆದುಕೊಳ್ಳಬಹುದು ನಮ್ಮೆಲ್ಲರ ಉದ್ದೇಶ. ಅದಕ್ಕಾಗಿ ಚಿನ್ನ ಪ್ರಮುಖ ಲೋಹವಾಗಿ ಗುರುತಿಸಿಕೊಳ್ಳುತ್ತಿದೆ.
ಚಿನ್ನದ ಬೆಲೆ ಇವತ್ತು ಸ್ವಲ್ಪ ಹೆಚ್ಚಳಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 87,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 95,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 87,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,700 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 16ಕ್ಕೆ)
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,200 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,130 ರೂ
• 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,350 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,200 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 95,130 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ