ಇಂದು ಕೋಲ್ಕತ್ತ ನೈಟ್ ರೈಡರ್ಸ್, ಆರ್ಸಿಬಿ ಮಧ್ಯೆ ಫೈಟ್: ಬೆಂಗಳೂರು ತಂಡದಲ್ಲಿ ಯಾರೆಲ್ಲ ಇರ್ತಾರೆ ಗೊತ್ತಾ..?

Date:

ಇಂದು ಕೋಲ್ಕತ್ತ ನೈಟ್ ರೈಡರ್ಸ್, ಆರ್ಸಿಬಿ ಮಧ್ಯೆ ಫೈಟ್: ಬೆಂಗಳೂರು ತಂಡದಲ್ಲಿ ಯಾರೆಲ್ಲ ಇರ್ತಾರೆ ಗೊತ್ತಾ..?

ಬೆಂಗಳೂರು: ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಇಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆಯಲಿದೆ.
ಇನ್ನು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಅಲ್ಲದೆ ಆರ್ಸಿಬಿ ಪಡೆ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅಷ್ಟೇ ಅಲ್ಲದೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಆರ್ಸಿಬಿ ತಂಡವು ಇಂದು ಗೆಲುವು ದಾಖಲಿಸಲೇಬೇಕು.
ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆಕೆಆರ್ ವಿರುದ್ಧ ಸೋಲನುಭವಿಸಿದರೆ, ಅಂಕ ಪಟ್ಟಿಯಲ್ಲಿ ಬದಲಾವಣೆ ಏನೂ ಆಗುವುದಿಲ್ಲ. ಅಲ್ಲದೆ ಆರ್ಸಿಬಿ 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲೇ ಉಳಿಯಲಿದೆ. ಇದಾಗ್ಯೂ ಪ್ಲೇಆಫ್ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಬೇಕಿದ್ದರೆ ಎಸ್ಆರ್ಹೆಚ್ ಅಥವಾ ಎಲ್ಎಸ್ಜಿ ವಿರುದ್ಧ ಜಯ ಸಾಧಿಸಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.
ಆರ್‌ಸಿಬಿಯ ಸಂಭಾವ್ಯ ಆಡುವ XI:
ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಯಶ್ ದಯಾಲ್, ಸುಯಾಶ್ ಶರ್ಮಾ.
ಕೆಕೆಆರ್‌ನ ಸಂಭಾವ್ಯ ಆಡುವ XI:
ಸುನಿಲ್ ನರೈನ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ಆಂಗ್ಕ್ರಿಶ್ ರಘುವಂಶಿ, ಮನೀಶ್ ಪಾಂಡೆ, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮೊಯಿನ್ ಅಲಿ, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...