ಬೆಂಗಳೂರಿನಲ್ಲಿ ಸಿಗರೇಟ್ ವಿಚಾರಕ್ಕೆ ಗಲಾಟೆ: ಕಾರಿನಿಂದ ಗುದ್ದಿ ಯುವಕನ ‘ಕೊಲೆ’

Date:

ಬೆಂಗಳೂರಿನಲ್ಲಿ ಸಿಗರೇಟ್ ವಿಚಾರಕ್ಕೆ ಗಲಾಟೆ: ಕಾರಿನಿಂದ ಗುದ್ದಿ ಯುವಕನ ‘ಕೊಲೆ’

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸಿಗರೇಟ್ ವಿಚಾರಕ್ಕೆ ಗಲಾಟೆ ನಡೆದು, ಕಾರಿನಿಂದ ಗುದ್ದಿ ಯುವಕನನ್ನು ಕೊಂದಿರುವ ಘಟನೆ ಕೋಣನಕುಂಟೆ ಕ್ರಾಸ್,ಕನಕಪುರ ರಸ್ತೆ ತಿರುವಿನ ಬಳಿ ನಡೆದಿದೆ. ಟೆಕ್ಕಿ ಸಂಜಯ್ ಕೊಲೆಯಾದ ದುರ್ದೈವಿಯಾಗಿದ್ದು, ಪ್ರತೀಕ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಸಂಜಯ್ ಹಾಗೂ ಚೇತನ್ ಎನ್ನುವ ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ಗಳು ಆಗಿದ್ದಾರೆ. ಇವರು ವರ್ಕ್ ಫ್ರಮ್ ಹೋಂ ಕೆಲಸ ಮಾಡಿ‌ ಟೀ ಕುಡಿಯಲು ಮೇ 10 ರಂದು ಬೆಳಗಿನ ಜಾವ 4 ಗಂಟೆಗೆ ಕೋಣನಕುಂಟೆ ಕ್ರಾಸ್ನಲ್ಲಿ ತಳ್ಳು ಗಾಡಿ ಬಳಿಗೆ ಬಂದಿದ್ದರು.
ಈ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಕಾರಿನಿಂದ ಇಳಿಯದೇ, ಸಂಜಯ್‌ಗೆ ಸಿಗರೇಟ್ ತಂದುಕೊಡುವಂತೆ ಹೇಳಿದ್ದ. ಇದರಿಂದ ಕೋಪಗೊಂಡ ಸಂಜಯ್ ಮತ್ತು ಕಾರ್ತಿಕ್ ಕಾರಿನಲ್ಲಿದ್ದ ಪ್ರತೀಕ್ ನಡುವೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಅಂಗಡಿಯವರು ಬಿಡಿಸಿ ಕಳುಹಿಸಿದ್ದರು. ಕೋಪಗೊಂಡ ಪ್ರತೀಕ್ ಕಾರಿನಲ್ಲಿ ಮುಂದೆ ಹೋಗಿ ರಸ್ತೆ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದ.
ಸಿಗರೇಟ್ ಸೇದಿ ಇಬ್ಬರೂ ಬೈಕ್‌ನಲ್ಲಿ ಮುಂದೆ ಬರುತ್ತಿದ್ದಂತೆ. ವೇಗವಾಗಿ ಬಂದು ಇಬ್ಬರು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ, ಸಂಜಯ್ ಸ್ಥಳದಲ್ಲೇ ಸಾವನ್ನಪ್ಪಿದ. ಕಾರ್ತಿಕ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿದ್ದ ಸುಬ್ರಹ್ಮಣ್ಯಪುರ ಠಾಣೆ ಪೊಲೀರು ಆರೋಪಿ ಪ್ರತೀಕ್ನನ್ನು ಬಂಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...