ವಿಜಯಪುರ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 6 ಮಂದಿ ಸಾವು
ವಿಜಯಪುರ: ಖಾಸಗಿ ಬಸ್, ಮಹೀಂದ್ರ ಎಕ್ಸ್ಯುವಿ ಹಾಗೂ ಕಂಟೇನರ್ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಐದು ಮಂದಿ ಸಾವಿಗೀಡಾಗಿದ್ದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಮಹೀಂದ್ರ ಎಕ್ಸ್ಯುವಿ 300 ಕಾರು, ಕಂಟೇನರ್, ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.