ಬೆಂಗಳೂರನ್ನು ಬಿಜೆಪಿ ಅವರು ಲೂಟಿ ಮಾಡಿ ಬಿಟ್ಟು ಹೋಗಿದ್ದಾರೆ: ಡಿಕೆ ಸುರೇಶ್!

Date:

ಬೆಂಗಳೂರನ್ನು ಬಿಜೆಪಿ ಅವರು ಲೂಟಿ ಮಾಡಿ ಬಿಟ್ಟು ಹೋಗಿದ್ದಾರೆ: ಡಿಕೆ ಸುರೇಶ್!

ಬೆಂಗಳೂರು:- ಬೆಂಗಳೂರನ್ನು ಬಿಜೆಪಿ ಅವರು ಲೂಟಿ ಮಾಡಿ ಬಿಟ್ಟು ಹೋಗಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಅವಾಂತರ ವಿಚಾರವಾಗಿ ಬಿಜೆಪಿಯಿಂದ ಡಿಕೆ ಶಿವಕುಮಾರ್ ವಿರುದ್ಧ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವಧಿಯಲ್ಲಿ ಮಳೆ ಬಂದಾಗ ಬೆಂಗಳೂರು ತೇಲುತ್ತಿತ್ತು. ನಮ್ಮ ಸರ್ಕಾರದಲ್ಲಿ ಮಳೆ ಪರಿಹಾರಕ್ಕೆ ಶಾಶ್ವತ ಪರಿಹಾರ ಕೊಡುವ ಕೆಲಸ ಮಾಡುತ್ತೇನೆ ಎಂದರು.

ಬಿಜೆಪಿ ಕಾಲದಲ್ಲಿ ಬೆಂಗಳೂರು ತೇಲುತ್ತಿತ್ತು. ಬಿಜೆಪಿ ಅವರು ಮರೆತು ಹೋಗಿದ್ದಾರೆ ಅನ್ನಿಸುತ್ತದೆ. ಪ್ರಕೃತಿ ನಡುವೆ ಯಾರು ಏನು ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಅವಧಿಯಲ್ಲಿ ಲೂಟರ್‌ಗಳು ಏನು ಮಾಡಿದ್ರು ಎಲ್ಲಾ ಬಾಕಿ ಕೊಡಬೇಕಾದರೆ 3 ವರ್ಷ ಬೇಕು. ಬೆಂಗಳೂರನ್ನು ಬಿಜೆಪಿ ಅವರು ಲೂಟಿ ಮಾಡಿ ಬಿಟ್ಟು ಹೋಗಿದ್ದಾರೆ. ಅದನ್ನು ಸರಿ ಮಾಡಬೇಕಾದರೆ ಕಾಲಾವಕಾಶ ಬೇಕಾಗುತ್ತದೆ ಎಂದರು.

ಸಿಎಂ, ಡಿಸಿಎಂ ಅವರು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಮುಂದಾಗಿದ್ದಾರೆ. ರಾಜಕಾಲುವೆ ಮೇಲೆ ಮನೆ ಕಟ್ಟಿದ್ದಾರೆ. ಅದಕ್ಕೆ ಯಾವುದೇ ನಿಯಮ ಇಲ್ಲ. ಇದಕ್ಕೆ ಬಿಜೆಪಿ ಕಡಿವಾಣ ಹಾಕಿರಲಿಲ್ಲ. ಕಾಂಗ್ರೆಸ್ ಈ ಕೆಲಸ ಮಾಡುತ್ತಿದೆ. ಇದಕ್ಕಾಗಿ ಕಾನೂನು ಮಾಡಲು ಚಿಂತನೆ ಮಾಡಲಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಖಂಡಿತ ಮುಂದಿನ ದಿನಗಳಲ್ಲಿ ಸಿಗಲಿದೆ. ಕಳೆದ ಬಾರಿ ಎಲ್ಲೆಲ್ಲಿ ಸಮಸ್ಯೆ ಆಗಿತ್ತು, ಈಗ ಅದು ಸರಿ ಹೋಗಿದೆ. ಎಲ್ಲಿ ಬಿಜೆಪಿ ಶಾಸಕರು ಸತತವಾಗಿ ಗೆದ್ದು ಬರುತ್ತಿದ್ದಾರೆ ಅಲ್ಲಿ ಏನು ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಅವರು ಹೇಳಬೇಕು ಎಂದು ಹೇಳಿದರು.

ಸುಮಾರು 2 ಸಾವಿರ ಕೋಟಿ ರಾಜಕಾಲುವೆ ಸರಿ ಮಾಡಲು ಹಣ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಕಾರ್ಯಕ್ರಮ ರೂಪಿಸಲಾಗಿದೆ. ಏನೇ ಮಾಡಬೇಕಾದರೂ ಆರ್ಥಿಕ ವ್ಯವಸ್ಥೆ ನೋಡಿಕೊಂಡು ಮಾಡಬೇಕು. ಆ ನಿಟ್ಟಿನಲ್ಲಿ ಬೆಂಗಳೂರು ಅಭಿವೃದ್ಧಿ ಪಡಿಸಲು ಸಿಎಂ ಅವರು ಮುಂದಿನ 3-4 ವರ್ಷಗಳ ಕಾಲ ಅನುದಾನ ಕೊಡುತ್ತಾರೆ. ಡಿಪಿಆರ್ ರೆಡಿ ಆಗುತ್ತಿದೆ. ಅದೆಲ್ಲ ಆದ ಮೇಲೆ ಬೆಂಗಳೂರಿಗೆ ಹೊಸ ರೂಪ ಸಿಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...

ನವರಾತ್ರಿ ಒಂಬತ್ತನೇ ದಿನದ ಪೂಜೆ – ಸಿದ್ಧಿದಾತ್ರಿಯ ಆರಾಧನೆ !

ನವರಾತ್ರಿ ಒಂಬತ್ತನೇ ದಿನದ ಪೂಜೆ – ಸಿದ್ಧಿದಾತ್ರಿಯ ಆರಾಧನೆ ! ಒಂಬತ್ತನೇ ದಿನ...

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ!

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ! ಹೃದಯಾಘಾತದಿಂದ ಹಿರಿಯ ರಂಗಭೂಮಿ...

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ ಅಬ್ಬರ

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ...