ಹೆಚ್ಚಿದ ಕೊರೊನಾ ಆತಂಕ: 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಪಾಸಿಟಿವ್
ಬೆಂಗಳೂರು: ಹಲವು ದೇಶಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇದಕ್ಕೆ ಕೊರೊನಾ ರೂಪಾಂತರ ತಳಿ ಕಾರಣ ಎನ್ನಲಾಗಿದೆ. ಆದರೆ, ಕರ್ನಾಟಕದಲ್ಲೂ ಈಗ ಕೊರೊನಾ ಸೋಂಕು ನಿಧಾನಕ್ಕೆ ಏರುಗತಿಯಲ್ಲಿ ಸಾಗುತ್ತಿರುವುದು ಆತಂಕ ಹುಟ್ಟಿಸಿದೆ. ಇದರ ನಡುವೆ ಬೆಂಗಳೂರಿನಲ್ಲಿ ಮೂವರು ಮಕ್ಕಳು ಸೇರಿದಂತೆ 9 ತಿಂಗಳ ಮಗುವಿಗೆ ಕೊರೊನಾ ವೈರಸ್ ಸೊಂಕು ತಗುಲಿದ್ದು,
9 ತಿಂಗಳ ಮಗುವಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಣಿವಿಲಾಸ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರಿದಿದೆ. ಇಂದು ಕೂಡಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾದರೆ ರ್ಯಾಂಡಮ್ ಟೆಸ್ಟನ್ನು ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದೆ.ಕೆಮ್ಮು ಮತ್ತು ಜ್ವರ ಹೊಂದಿರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಮಾಡಲು ಚರ್ಚಿಸಲಾಗುತ್ತಿದೆ