ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಉಸಿರು ಚಲ್ಲಿದ 3 ವರ್ಷದ ಬಾಲಕಿ!
ಮಂಡ್ಯ:- ಮಂಡ್ಯದ ಸ್ವರ್ಣಸಂದ್ರ ಬಳಿ ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ದಾರುಣ ಘಟನೆ ಜರುಗಿದೆ. ಹೃತೀಕ್ಷಾ ಮೃತ ಬಾಲಕಿ.
ಬಾಲಕಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ, ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಬೈಕ್ ಆಯಾ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.
ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ರಸ್ತೆಯಲ್ಲೇ ಮಗುವನ್ನು ಮಡಿನಲ್ಲಿಟ್ಟುಕೊಂಡು ತಂದೆ-ತಾಯಿ ಗೋಳಾಡಿದ್ದಾರೆ. ಅಲ್ಲದೇ ಸಾರ್ವಜನಿಕರು, ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಅವರು ಮೃತ ಮಗುವಿನ ಪೋಷಕರಿಗೆ ಸಾಥ್ ನೀಡಿದ್ದು, ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.