ರಾಜ್ಯದಲ್ಲಿ ಜೂನ್ 2 ರವರೆಗೂ ಭಾರೀ ಮಳೆ: ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ – ಹವಾಮಾನ ಇಲಾಖೆ
ಬೆಂಗಳೂರು: ದೇಶದ ನಾನಾ ರಾಜ್ಯದಲ್ಲಿ ಮಳೆಯ ತಾಂಡವ ಜೋರಾಗಿಯೇ ಇದೆ. ಕೆಲವೆಡೆ ಈಗ ಎಂಟ್ರಿ ಕೊಡ್ತಿದ್ರೆ. ಇನ್ನೂ ಕೆಲವೆಡೆ ಈಗಾಗಲೇ ತನ್ನ ಸ್ವರೂಪವನ್ನ ತೋರಿಸೋದಕ್ಕೆ ಶುರು ಮಾಡಿದ್ದಾನೆ.
ಇದೀಗ ರಾಜ್ಯದಲ್ಲಿ ಜೂನ್ 2ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಲಿದೆ.
ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ. ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.